ಕರ್ನಾಟಕ

ಸಿದ್ದರಾಮಯ್ಯಗೆ ಸಿಎಂ ಸ್ಥಾನದ ಹುಚ್ಚು ಹಿಡಿದಿದೆ: ಈಶ್ವರಪ್ಪ ಲೇವಡಿ

Pinterest LinkedIn Tumblr

ವಿಜಯಪುರ: ರಾಜಕೀಯ ಚಟುವಟಿಕೆ ಗಮನಿಸಿದರೆ ಸಮ್ಮಿಶ್ರ ಸರಕಾರದಲ್ಲಿ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ. ಕಾಂಗ್ರೆಸ್ ಪಕ್ಷ ಜೀವಂತವಾಗಿದೆಯೋ ಇಲ್ಲವೋ ಗೊತ್ತಿಲ್ಲ. ಕೆಲವರು ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹೇಳುತ್ತಿದ್ದಾರೆ. ಮೈತ್ರಿಗೆ ಅರ್ಥವೇ ಇಲ್ಲ. ಬೇಷರತ್ ಬೆಂಬಲ ಅಂದ್ರೆ ಸಿಎಂಗೆ ವರ್ಷವಿಡೀ ಕಣ್ಣೀರು ಸುರಿಸುವುದು ಎಂದಾಗಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿದರು.

ವಿಜಯಪುರದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯಗೆ ಒಳ್ಳೆಬುದ್ಧಿ ಕೊಡಲು ಬೀರೇಶ್ವರನಿಗೂ ಆಗಲ್ಲ. ಸಿದ್ದರಾಮಯ್ಯಗೆ ಒಬ್ಬರೂ ಬುದ್ಧಿ ಹೇಳುತ್ತಿಲ್ಲ. ಸಿದ್ದರಾಮಯ್ಯ ಬಿಟ್ಟರೆ ಬೇರಾರೂ ಹಿಂದುಳಿದ ನಾಯಕರು ಇಲ್ಲವೇ? ಎಂದು ಪ್ರಶ್ನಿಸಿದರು.

ಬಿಜೆಪಿ ಶಿಸ್ತಿನ ಪಕ್ಷ ಎಂದ ಈಶ್ವರಪ್ಪ, ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಿಂದುಳಿದ ನಾಯಕರಲ್ಲವೇ ಎಂದು ಪ್ರಶ್ನಿಸಿ ಸಿದ್ದರಾಮಯ್ಯಗೆ ಟಾಂಗ್ ನೀಡಿದರು.

ನಿಮ್ಮ ದಾರಿ ನಿಮಗೆ ನಮ್ಮ ದಾರಿ ನಮಗೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅನೇಕರು ಹೇಳಿದ್ದಾರೆ. ಸಿದ್ದರಾಮಯ್ಯ ನಾನೇ ಸಿಎಂ ಎಂದು ಹುಚ್ಚು ಹುಚ್ಚಾಗಿ ಹೇಳಿದರೆ ನಾಳೆ ಯಾರೂ ಮಾತಾಡಲ್ಲ. ಸಿದ್ದರಾಮಯ್ಯಗೆ ಸಿಎಂ ಸ್ಥಾನದ ಹುಚ್ಚು ಹಿಡಿದಿದೆ. ಸಿದ್ದರಾಮಯ್ಯನ ಥರ ನನಗೆ ಹುಚ್ಚು ಹಿಡಿದಿಲ್ಲ. ನಾನು ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಪಕ್ಷ ಕೊಡುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದು ಈಶ್ವರಪ್ಪ ತಿರುಗೇಟು ನೀಡಿದರು.

ಇಡೀ ಪ್ರಪಂಚವೇ ಮೋದಿ ಅವರು ಮತ್ತೆ ಪ್ರಧಾನಿಯಾಗುವುದನ್ನು ಎದುರು ನೋಡುತ್ತಿದೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್ ಸೇರಿದ್ದಾರೆ. ಖರ್ಗೆ ಅವರು ಸಿದ್ದರಾಮಯ್ಯನ ಹುಚ್ಚು ಬಿಡಿಸಲು ಮದ್ದು ಕೊಡಿಸಬೇಕು ಎಂದು ಲೇವಡಿ ಮಾಡಿದರು.

ಯಡಿಯೂರಪ್ಪ ನಂತರ ನಾನೂ ಸಿಎಂ ಆಗುತ್ತೇನೆಂದು ಹೇಳಿರುವ ಯತ್ನಾಳ ಇನ್ನೊಬ್ಬ ಹುಚ್ಚ ಎಂದು ಈಶ್ವರಪ್ಪ ಅವರು ಯತ್ನಾಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು.

Comments are closed.