ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಬಿರುಗಾಳಿ, ಗುಡುಸಹಿತ ಭಾರೀ ಮಳೆಗೆ ವಾಹನ ಸವಾರರು ಪರದಾಡುವಂತಾಯಿತು.
ಬೆಂಗಳೂರಿನ ಭೈರತಿ, ಹೆಗಡೆನಗರ, ಸಂಪೀಗೆಹಳ್ಳಿ, ಅಮೃತಹಳ್ಳಿ, ಯಲಹಂಕ ಸುತ್ತಮುತ್ತ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಹವಾಮಾನ ಇಲಾಖೆ ಪ್ರಕಾರ ಇನ್ನೆರಡು ದಿನ ಮಳೆ ಇರಲಿದೆ.
ಇನ್ನು ಬೆಂಗಳೂರು ಮಾತ್ರವಲ್ಲದೇ, ಅಕ್ಕಪಕ್ಕದ ಜಿಲ್ಲೆ, ತಾಲೂಕಿನಲ್ಲೂ ಕೂಡ ವರುಣನ ಆರ್ಭಟ ಜೋರಾಗಿತ್ತು. ಕೋಲಾರದಲ್ಲೂ ಧಾರಾಕಾರ ಮಳೆ ಸುರಿದಿದ್ದು, ತರಕಾರಿ ಮಾರುಕಟ್ಟೆಯಲ್ಲಿ ನೀರು ತುಂಬಿ ವ್ಯಾಪಾರಿಗಳು ಪರದಾಡಿದ್ದಾರೆ. ಅಲ್ಲದೇ, ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ನಗರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು.