ಕರ್ನಾಟಕ

ಗೋಡ್ಸೆ ಪರ ಹೇಳಿಕೆ; ಸಚಿವ ಅನಂತ್ ಕುಮಾರ್ ಹೆಗ್ಡೆ, ನಳೀನ್ ಮತ್ತು ಸಾಧ್ವಿಗೆ ನೋಟಿಸ್

Pinterest LinkedIn Tumblr


ನವದೆಹಲಿ: ಮಹಾತ್ಮ ಗಾಂಧಿಯನ್ನು ಅವಮಾನಿಸಿದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ನಾವು ಯಾವತ್ತೂ ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನ್ಯೂಸ್ 24 ಚಾನೆಲ್ ಗೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದರು. ಮತ್ತೊಂದೆಡೆ ಗೋಡ್ಸೆ ಪರ ಮಾತನಾಡಿದ ಸಾಧ್ವಿ ಪ್ರಜ್ಞಾ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮತ್ತು ಸಂಸದ ನಳೀನ್ ಕುಮಾರ್ ಕಟೀಲ್ ಗೆ ಬಿಜೆಪಿಯ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದ್ದು, 10 ದಿನದೊಳಗೆ ವಿವರಣೆ ನೀಡುವಂತೆ ಸೂಚಿಸಿರುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದರು.

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರು ಗೋಡ್ಸೆ ಪರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಗೋಡ್ಸೆ ದೇಶಭಕ್ತ ಎಂದು ಸಾಧ್ವಿ ಪ್ರಜ್ಞಾ ಅವರು ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಏತನ್ಮಧ್ಯೆ ಸಾಧ್ವಿ ಹೇಳಿಕೆ ಪಕ್ಷದ್ದಲ್ಲ, ವೈಯಕ್ತಿಕವಾಗಿದ್ದು ಎಂದು ಹೇಳಿಕೆ ನೀಡಿತ್ತು. ಬಳಿಕ ಸಾಧ್ವಿ ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದರು. ಅನಂತ್ ಕುಮಾರ್ ಹೆಗ್ಡೆ ಕೂಡಾ ತಮ್ಮ ಟ್ವೀಟರ್ ಖಾತೆ ಹ್ಯಾಕ್ ಆಗಿದ್ದು, ಯಾರ ಮನಸ್ಸಿಗಾದರು ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದ್ದರು. ಅದೇ ರೀತಿ ನಳಿನ್ ಕುಮಾರ್ ಕಟೀಲ್ ಸಹ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿ ಕ್ಷಮೆಯಾಚಿಸಿದ್ದರು.

Comments are closed.