ಕರ್ನಾಟಕ

ದೇವೇಗೌಡ, ಪ್ರಜ್ವಲ್ , ನಿಖಿಲ್ ಸೋಲು ಖಚಿತ

Pinterest LinkedIn Tumblr


ಹುಬ್ಬಳ್ಳಿ: ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ, ಹಾಸನ ಲೋಕಸಭೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಮಂಡ್ಯ ಲೋಕಸಭೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲುತ್ತಾರೆ. ಜನರು ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಮನೆಗೆ ಕಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸಿದ್ದರಾಮಯ್ಯ ಟೈಮ್ ಬಾಂಬ್ ಫಿಕ್ಸ್ ಮಾಡಿದ್ದಾರೆ

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರೀಕೃತ ರಾಜಕೀಯ ನಡೆಯುತ್ತಿದೆ. ಸಿದ್ದರಾಮಯ್ಯ ಟೈಮ್ ಬಾಂಬ್ ಫಿಕ್ಸ್ ಮಾಡಿದ್ದಾರೆ. ಇಂತದರಲ್ಲಿ ಇವರು ಎಕ್ಸ್ಪರ್ಟ್.
ಮೇ 23 ರ ನಂತರ ಸರ್ಕಾರ ಸ್ಪೋಟ ಮಾಡುತ್ತಾರೆ ಎಂದರು.

ಒತ್ತಾಯದ ಮದುವೆ ಮುರಿದು ಹೋಗುತ್ತೆ – ಜಗದೀಶ್ ಶೆಟ್ಟರ್

ಮೈತ್ರಿ ಸರ್ಕಾರದ ಗೊಂದಲದಿಂದ ಜನ ಬೇಸತ್ತಿದ್ದಾರೆ. ಎಲ್ಲ ಶಕ್ತಿಗಳು ಸೇರಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಳಗಿಳಿಸಲು ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಒತ್ತಾಯದ ಮದುವೆಯಾಗಿವೆ. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಒತ್ತಾಯದ ಮದುವೆ ಮುರಿದು ಹೋಗುತ್ತೆ. ಮೇ 23ರ ನಂತರ ರಾಜ್ಯದಲ್ಲಿ ಬದಲಾವಣೆ ಆಗುತ್ತೆ ಎಂದು ಜಗದೀಶ್ ಶೆಟ್ಟರ್ ನುಡಿದರು.

Comments are closed.