ಕರ್ನಾಟಕ

LKG-UKG ಆರಂಭಕ್ಕೆ ತೀವ್ರ ವಿರೋಧ..!

Pinterest LinkedIn Tumblr


ಸರ್ಕಾರಿ ಶಾಲೆಗಳಲ್ಲಿ ಕನ್ನಡ ಬೆಳೆಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ತೀರ್ಮಾನಿಸಿದೆ.

276 ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ವರ್ಷದಿಂದ ಎಲ್​​ಕೆಜಿ-ಯುಕೆಜಿ ಪ್ರಾರಂಭಿಸಲಿದೆ. 4100 ಅಂಗನವಾಡಿ ಕೇಂದ್ರಗಳನ್ನು ಪ್ರಾಥಮಿಕ ಶಾಲೆ ಆವರಣಕ್ಕೆ ಸ್ಥಳಾಂತರಿಸಲು ಸಿದ್ಧತೆ ನಡೆಸಿದ್ದು, ಸರ್ಕಾರದ ನಡೆಗೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಅಂಗನವಾಡಿ ಕೇಂದ್ರಗಳತ್ತ ಬರ್ತಿರೋ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಹೀಗಿರುವಾಗ ಸರ್ಕಾರಿ ಶಾಲೆ ಆವರಣಕ್ಕೆ ಸ್ಥಳಾಂತರಿಸಿದರೆ, ಅಂಗನವಾಡಿಯನ್ನು ಮುಚ್ಚಬೇಕಾಗುತ್ತದೆ. ಇದರಿಂದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಅಂಗನವಾಡಿಯಲ್ಲಿಯೇ ಪ್ರಿ ನರ್ಸರಿ ಆರಂಭಿಸುವಂತೆ ಒತ್ತಾಯಿಸಿದರು.

ಇದು ಅವೈಜ್ಞಾನಿಕ ಆದೇಶವಾಗಿದ್ದು, ಅಂಗನವಾಡಿ ಕೇಂದ್ರ ದುರ್ಬಲಗೊಳ್ಳುತ್ತವೆ. ಒಂದು ಇಲಾಖೆ ದುರ್ಬಲಗೊಳಿಸಿ ಇನ್ನೊಂದು ಇಲಾಖೆ ಬಲವರ್ಧನೆ ಎಷ್ಟರ ಮಟ್ಟಿಗೆ ಸರಿ. ರಾಜ್ಯದಲ್ಲಿ 65,911 ಅಂಗನವಾಡಿ ಕೇಂದ್ರಗಳು ಹಾಗೂ 3331 ಮಿನಿ ಅಂಗನವಾಡಿಗಳಿದ್ದು, 16 ಲಕ್ಷ ಮಕ್ಕಳು ವ್ಯಾಸಂಗ ಮಾಡ್ತಿದ್ದಾರೆ. ಪ್ರಾಥಮಿಕ ಶಾಲೆಗಳಿಗೆ ಸ್ಥಳಾಂತರಿಸಿದರೆ, ಮಕ್ಕಳ ಮಾಸಿಕ ಹಾಗೂ ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರೋ ಸಾಧ್ಯತೆಯಿದ್ದು, ಸರ್ಕಾರ ಇದನ್ನು ಹಿಂಪಡೆಯದಿದ್ದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಮಾಡೋದಾಗಿ ಎಚ್ಚರಿಸಿದ್ದಾರೆ.

Comments are closed.