ಹಾಸನ: ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಕುಲದೇವರ ದರ್ಶನ ಪಡೆದ ಶಾಸಕಿ ಅನಿತಾ ಕುಮಾರಸ್ವಾಮಿ, ಮಗನ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪುತ್ರ ನಿಖಿಲ್ ಜೊತೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಮಾಧ್ಯಮದ ಜೊತೆ ಮಾತನಾಡಿದ ಅನಿತಾ ಕುಮಾರಸ್ವಾಮಿ, ಮಂಡ್ಯದಲ್ಲಿ 100% ನಮ್ಮದೇ ಗೆಲುವು. ನಾವು ಗೆಲ್ಲುತ್ತೇವೆಂದು ನನಗೆ ನೂರಕ್ಕೆ ನೂರು ಗ್ಯಾರಂಟಿ ಇದೆ ಎಂದು ಮಗನ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಮಂಡ್ಯ, ಹಾಸನ, ತುಮಕೂರು ಈ ಮೂರು ಜಿಲ್ಲೆಯಲ್ಲೂ ನಮ್ಮದೇ ಗೆಲುವು ಎಂದು ಹೇಳಿದ ಅನಿತಾ ಕುಮಾರಸ್ವಾಮಿ, ಐದು ವರ್ಷಗಳ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುತ್ತದೆ. ಐದು ವರ್ಷವೂ ಕುಮಾರಸ್ವಾಮಿ ಅವರೇ ಸಿಎಂ ಆಗಿರುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅದು ಫಲ ಕೊಡುವುದಿಲ್ಲ, ಐದು ವರ್ಷ ಕುಮಾರಸ್ವಾಮಿ ಅವರೇ ಸಿಎಂ. ಸರ್ಕಾರ ಸ್ಥಿರವಾಗಿರುತ್ತದೆ ಎಂದು ಅನಿತಾ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Comments are closed.