ಕರ್ನಾಟಕ

ಲೋಕ ಸಮರ; ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

Pinterest LinkedIn Tumblr

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, 28 ಕ್ಷೇತ್ರಗಳಲ್ಲಿ ಗರಿಷ್ಠ ಸ್ಥಾನ ಬಿಜೆಪಿಗೋ ಅಥವಾ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಕೂಟಕ್ಕೋ ಎಂಬುದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ. ರಾಜ್ಯದಲ್ಲಿ ಮಂಡ್ಯ, ತುಮಕೂರು ಹಾಗೂ ಹಾಸನ ಕ್ಷೇತ್ರಗಳು ಎಲ್ಲರ ಕುತೂಹಲದ ಕೇಂದ್ರ ಬಿಂದು.

ಇಂದಿನ ಫಲಿತಾಂಶವು ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಲಿದೆ.

ಒಟ್ಟು 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳ ಮಾಹಿತಿ ಲಭ್ಯವಾಗಿದ್ದು, ಬಿಜೆಪಿ 23, ಕಾಂಗ್ರೆಸ್‌ 3, ಜೆಡಿಎಸ್‌ 2 ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದೆ. ಮತ ಎಣಿಕೆ ಕಾರ್ಯ ಚುರುಕು ಪಡೆದುಕೊಂಡಿದೆ.

ರಾಜ್ಯ ರಾಜಕೀಯದ ಮೇಲೂ ಈ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಪರಿಣಾಮ ಬೀರಲಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಭಾರಿ ಮುನ್ನಡೆಯೊಂದಿಗೆ ಅಂತರ ಕಾಪಾಡಿಕೊಂಡಿದ್ದಾರೆ.

ಇಡೀ ಇಂಡಿಯಾದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್‌ ಕುಮಾರಸ್ವಾಮಿ ಮುನ್ನಡೆ ಪಡೆದಿದ್ದಾರೆ. ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರಂಭಿಕ ಹಿನ್ನಡೆ ಪಡೆದುಕೊಂಡಿದ್ದರು ಈಗ ಎರಡನೇ ಸುತ್ತಿನಲ್ಲಿ ಮುನ್ನಡೆ ಪಡೆದಿದ್ದಾರೆ. ಧಾರವಾಡದಲ್ಲಿ ಪ್ರಹ್ಲಾದ್ ಜೋಷಿ ಮುನ್ನಡೆ ಪಡೆದುಕೊಂಡಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮುನ್ನಡೆ ಪಡೆದಿದ್ದಾರೆ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್‌. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

Comments are closed.