ಕರ್ನಾಟಕ

ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಿದ್ದು 1 ಕ್ಷೇತ್ರ, ಜೆಡಿಎಸ್ 1 ಕ್ಷೇತ್ರ!

Pinterest LinkedIn Tumblr


ಬೆಂಗಳೂರು: ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ತಿರಸ್ಕರಿಸಿರುವ ಮತದಾರರು ಬಿಜೆಪಿ ಕೈ ಹಿಡಿದಿದ್ದಾರೆ. ಈ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ ಧೂಳೀಪಟವಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಒಂದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ ಕೂಡಾ ಕೇವಲ ಒಂದೇ ಕ್ಷೇತ್ರದಲ್ಲಿ ಜಯ ಗಳಿಸಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಭೇರಿ ಬಾರಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 17 ಸ್ಥಾನಗಳಲ್ಲಿ, ಕಾಂಗ್ರೆಸ್ 09 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಜಯಗಳಿಸಿತ್ತು. ಈ ಬಾರಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಮಾತ್ರ ಜಯಗಳಿಸಿದ್ದಾರೆ. ಉಳಿದೆಡೆ ಘಟಾನುಘಟಿ ನಾಯಕರು ಸೋಲಿನ ರುಚಿ ಕಂಡಿದ್ದಾರೆ. ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಮಾತ್ರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಇನ್ನು ಹೈವೋಲ್ಟೇಜ್ ಎಂದೇ ಪರಿಗಣಿಸಲ್ಪಟ್ಟಿದ್ದ ಮಂಡ್ಯ ಮತ್ತು ತುಮಕೂರು ಕ್ಷೇತ್ರದಲ್ಲಿ ನಿಖಿಲ್, ದೇವೇಗೌಡರು ಪರಾಜಯಗೊಂಡಿದ್ದಾರೆ.

Comments are closed.