ಕರ್ನಾಟಕ

ರಾಜೀನಾಮೆ ನೀಡಿದ ಎಚ್.ಕೆ. ಪಾಟೀಲ್

Pinterest LinkedIn Tumblr


ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ರವಾನೆ

ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ರವಾನೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಮುಂದುವರೆಯಬೇಕಾ ಬೇಡವಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ಮುಂದುವರಿಯಬೇಕಾ ಎನ್ನುವುದಕ್ಕೆ ಕಾಲವೇ ಉತ್ತರಿಸಲಿದೆ. ಎರಡು ಕಡೆಯವರು ಕುಳಿತು ಈ ಬಗ್ಗೆ ಚರ್ಚಿಸಬೇಕಾಗಿದೆ. ಈ ಫಲಿತಾಂಶ ರಾಜ್ಯ ಸರ್ಕಾರಕ್ಕೂ ಶಾಕ್ ಕೊಟ್ಟಿದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಬಹಳ ದಿನ‌ ಮುಂದುವರಿಯಲ್ಲ ಎಂದು ಇದೇ ವೇಳೆ ಪರೋಕ್ಷವಾಗಿ ಒಪ್ಪಿಕೊಂಡರು.

ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗುತ್ತೇವೆ

ಇನ್ನು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳು, ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗುತ್ತೇವೆ. ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Comments are closed.