ಕರ್ನಾಟಕ

ಸಿಎಂ ಎಚ್ಡಿಕೆ ರಾಜಿನಾಮೆ ನೀಡಲ್ಲ, ಅವರೇ ಮುಂದುವರಿತಾರೆ- ಮಾಜಿ ಸಿಎಂ ಸಿದ್ದರಾಮಯ್ಯ

Pinterest LinkedIn Tumblr

ನವದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು. ಬಹಿರಂಗವಾಗಿ ಇದನ್ನು ಚರ್ಚೆ ಮಾಡಲು ಸಾಧ್ಯವಿಲ್ಲ. ಒಂದು ಸೀಟು ಬಂದಿದ್ದು ನಾವು ಒಪ್ಪಿಕೊಂಡಿದ್ದೇವೆ ಜನರ ತೀರ್ಪು ನಾವು ತಲೆ ಭಾಗಿ ಒಪ್ಪಿಕೊಂಡಿದ್ದೇವೆ ಅಂದರು.

Comments are closed.