ಕರ್ನಾಟಕ

ಬಿಜೆಪಿಗೆ ‘ಆನೆ’ ಬಲ: ಪ್ರಭಾವಿ ಶಾಸಕನಿಂದ ಬೆಂಬಲ?

Pinterest LinkedIn Tumblr


ಚಾಮರಾಜನಗರ : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಈ ನಿಟ್ಟಿನಲ್ಲಿ ಇನ್ನೋರ್ವ ಶಾಸಕ ಬಿಜೆಪಿ ಬೆಂಬಲಿಸುವ ಸಾಧ್ಯತೆ ಇದೆ.

ಕೊಳ್ಳೆಗಾಲ ಕ್ಷೇತ್ರದ BSP ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಮಹೇಶ್ ಜೊತೆಗೆ ಬಿಜೆಪಿ ಮುಖಂಡರಿಂದ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಕ್ಷೇತ್ರದಲ್ಲಿ ಸುದ್ದಿಯಾಗುತ್ತಿದೆ.

ಈ ಹಿಂದೆ ಒಳ್ಳೆಯ ಸಚಿವ ಸ್ಥಾನ ನೀಡುತ್ತೇವೆ ಎಂದು ಮಹೇಶ್‌ಗೆ ಆಫರ್ ನೀಡಿದ್ದು, ಹೀಗಾಗಿ ಬಿಎಸ್‌ಪಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Comments are closed.