ಕರ್ನಾಟಕ

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಬಿಗ್ ಶಾಕ್!

Pinterest LinkedIn Tumblr


ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ 4 ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದೆ.

ಜೂನ್‌ನಿಂದ ಸರ್ಕಾರಿ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟಲಿದ್ದು, ಸಾರಿಗೆ ನಿಗಮಗಳ ನಷ್ಟದ ನೆಪವೊಡ್ಡಿ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇಕಡಾ 20ರಷ್ಟು ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಏಳು ವರ್ಷದಿಂದ ಟಿಕೆಟ್ ದರ ಹೆಚ್ಚು ಮಾಡಿಲ್ಲ.ಇದೀಗ ಪೆಟ್ರೋಲ್ ದರ ಹೆಚ್ಚಳವಾಗಿದ್ದರಿಂದ ಸರ್ಕಾರಿ ಬಸ್ ಟಿಕೆಟ್ ದರ ಕೂಡ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.

ಸಂಸ್ಥೆಗಳ ಸಬಲೀಕರಣಕ್ಕೆ ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದೆ. ದರ ಹೆಚ್ಚಳದ ಮೂಲಕ ಇನ್ನೂ ಸೌಲಭ್ಯ ನೀಡಲು ಚಿಂತನೆ ನಡೆಸಲಾಗಿದ್ದು, ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳಿಂಗ ಟಿವಿ5ಗೆ ಮಾಹಿತಿ ದೊರೆತಿದೆ.

Comments are closed.