ಕರ್ನಾಟಕ

ಚುನಾವಣೆಯಲ್ಲಿ ಸೋಲು; ಜನರ ಹೃದಯ ಗೆಲ್ಲಲು ಕುಮಾರಸ್ವಾಮಿಯಿಂದ ಹೊಸ ಯೋಜನೆ

Pinterest LinkedIn Tumblr


ಬೆಂಗಳೂರು: ಮೈತ್ರಿ ಮೂಲಕ ಲೋಕಸಭಾ ಚುನಾವಣೆ ಎದುರಿಸಿದ್ದ ಕಾಂಗ್ರೆಸ್​​-ಜೆಡಿಎಸ್​ಗೆ ಹೀನಾಯ ಸೋಲುಂಟಾಗಿದೆ. ಅದರಲ್ಲೂ ಭದ್ರಕೋಟೆ ಎನಿಸಿಕೊಂಡಿದ್ದ ಮಂಡ್ಯ ಜೆಡಿಎಸ್ ಕೈ ತಪ್ಪಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಎಚ್​ಡಿ ಕುಮಾರಸ್ವಾಮಿ ಜನರಿಗೆ ಹತ್ತಿರವಾಗಲು ಹೊಸ ಯೋಜನೆಯೊಂದನ್ನು ರೂಪಿಸಿದ್ದಾರೆ.

ಮೂಲಗಳ ಪ್ರಕಾರ ಕುಮಾರಸ್ವಾಮಿ ಶೀಘ್ರದಲ್ಲೇ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಮಡಿಕೇರಿಯಲ್ಲಿ ಕಳೆದ ಬಾರಿ ಮಳೆಯಿಂದ ಸಾಕಷ್ಟು ಹಾನಿ ಉಂಟಾಗಿತ್ತು. ನಿರಾಶ್ರಿತರಿಗೆ ಸರ್ಕಾರ ಸಹಾಯ ಒದಿಗಿಸಿತ್ತು. ಹೀಗಿದ್ದರೂ ಸಹ ಈ ಭಾಗದಲ್ಲಿ ಸಾಕಷ್ಟು ಕುಂದು ಕೊರತೆಗಳಿವೆ. ಇದನ್ನು ಹತ್ತಿರದಿಂದ ಆಲಿಸಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಹಾಗಾಗಿ ಮಡಿಕೇರಿಯಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲು ಚಿಂತನೆ ನಡೆಸಿದ್ದಾರೆ.

ಈಗಾಗಲೇ ಮುಖ್ಯಮಂತ್ರಿಗಳ ಇಲಾಖೆ ಸಿಬ್ಬಂದಿ ಗ್ರಾಮ ವಾಸ್ತವ್ಯದ ರೂಪರೇಷಗಳನ್ನು ಸಿದ್ಧಪಡಿಸುತ್ತಿದ್ದಾರೆ. ಗ್ರಾಮ ವಾಸ್ತವ್ಯದ ಮೂಲಕ ಜನರಿಗೆ ಹತ್ತಿರವಾಗಲು ಕುಮಾರಸ್ವಾಮಿ ಯೋಜನೆ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಶೀಘ್ರದಲ್ಲೇ ಸಿಎಂ ಕಚೇರಿ ಅಧಿಕೃತವಾಗಿ ಈ ಬಗ್ಗೆ ಮಾಹಿತಿ ನೀಡಲಿದೆ ಎನ್ನಲಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಟ್ಟು 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನ ಗೆದ್ದರೆ. ಕಾಂಗ್ರೆಸ್​, ಜೆಡಿಎಸ್​ ಹಾಗೂ ಪಕ್ಷೇತರ ಅಭ್ಯರ್ಥಿ ತಲಾ ಒಂದು ಸ್ಥಾನ ಗೆದ್ದಿದ್ದರು.

Comments are closed.