ಕರ್ನಾಟಕ

ಬಿಜೆಪಿಗೆ ದೊಡ್ಡ ಬೆಂಬಲ ಸಿಕ್ಕಿದೆ: ಪ್ರಹ್ಲಾದ್‌ ಜೋಶಿ

Pinterest LinkedIn Tumblr


ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ, ದೇಶ ಮತ್ತು ಜನರ ಹಿತ ಕಾಪಾಡಲು ಬದ್ದವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಜನರು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಬೆಂಬಲ ಮಾಡಿದ್ದಾರೆ. ಅವರ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆಬಾರದ ರೀತಿಯಲ್ಲಿ ಕೆಲಸ ಮಾಡಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿ, ಕಳೆದ 25 ವರ್ಷಗಳಿಂದ ಪ್ರಹ್ಲಾದ್ ಜೋಶಿ ಪಕ್ಷದ ಸಂಘಟನೆಗಾಗಿ ದುಡಿದಿದ್ದು ಅದರ ಫಲವಾಗಿ ಈಗ ಕೇಂದ್ರ ಸಂಪುಟದಲ್ಲಿ ಅವಕಾಶ ದೊರಕಿದೆ ಎಂದರು.

Comments are closed.