ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶಕ್ಕೆ ಮುನ್ನ ವರುಣ ಅಬ್ಬರಿಸಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಗಾಳಿ ಮಳೆಸುರಿದಿದ್ದು, ಹಲವು ಅವಾಂತರಗಳನ್ನಸೃಷ್ಟಿಸಿದೆ. ಬಳ್ಳಾರಿಯಲ್ಲಿ ಬಾಲಕಿಯೊಬ್ಬಳು ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾಳೆ.
ಬೆಂಗಳೂರು ನಗರ, ಬೆಳಗಾವಿ, ಬಳ್ಳಾರಿಯ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಹರಪನಹಳ್ಳಿಯಲ್ಲಿಬುಧವಾರ ರಾತ್ರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ 9 ವರ್ಷದ ಸಹರಾ ಎಂಬ ಬಾಲಕಿ ದಾರುಣವಾಗಿ ಸಾವನ್ನಪ್ಪದ್ದಾಳೆ. ಮನೆಯಲ್ಲಿ ಮಲಗಿದ್ದ ಮೂವರು ಗಂಭೀರವಾಗಿ ಗಾಯಗೊಂಡು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.