ಕರ್ನಾಟಕ

ಬಳ್ಳಾರಿ ಪ್ರವೇಶ ಮಾಡಲು ಜನಾರ್ಧನ ರೆಡ್ಡಿಗೆ ಸುಪ್ರೀಂ ಗ್ರೀನ್ ಸಿಗ್ನಲ್

Pinterest LinkedIn Tumblr


ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿ ಜಿಲ್ಲೆಗೆ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಬಳ್ಳಾರಿ ಪ್ರವೇಶಕ್ಕೆ ಅನುಮತಿ ಕೋರಿ ಜನಾರ್ದನ ರೆಡ್ಡಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ರಜಾ ಕಾಲದ ಪೀಠ, ಜೂನ್‌ 8 ರಿಂದ 2 ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ. ಆದರೆ, ಈ ಭೇಟಿ ವೇಳೆ ತಮ್ಮ ವಿರುದ್ಧ ಸಾಕ್ಷ್ಯಗಳ ನಾಶಪಡಿಸುವ ಪ್ರಯತ್ನ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸದಂತೆ ಷರತ್ತು ವಿಧಿಸಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜನಾರ್ದನರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್‌ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಆದರೆ, ತಮ್ಮ ಮಾವ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬಳ್ಳಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗಾಗಿ ಬಳ್ಳಾರಿಗೆ ಹೋಗಲು ಅನುಮತಿ ನೀಡಬೇಕೆಂದು ಕೋರಿ ಜನಾರ್ಧನ ರೆಡ್ಡಿ ಮನವಿ ಸಲ್ಲಿಸಿದ್ದರು.

Comments are closed.