ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಯಾವುದೇ ಅನಾಹುತ ಸಂಭವಿಸಿದಂತೇ ತೀವ್ರತರವಾದ ಕಟ್ಟೆಚ್ಚರ ವಹಿಸಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ಕೇರಳಕ್ಕೆ ಮುಂಗಾರು ಪ್ರವೇಶ ಬೆನ್ನಲ್ಲೇ ಕರ್ನಾಟಕದಲ್ಲಿ 12 ರಂದು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.