ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಧೀಡಿರ ಬಿಜೆಪಿ ಕಚೇರಿಗೆ ಆಗಮಿಸಿದ ಸುಮಲತಾ ಅವರನ್ನು ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್. ಸಂತೋಷ್ಜಿ ಸ್ವಾಗತಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಬರ ಅಧ್ಯಯನ ಪ್ರವಾಸ ಕೈಗೊಂಡಿರೋ ಹೊತ್ತಿನಲ್ಲಿ ಸುಮಲತಾ ಬಿಜೆಪಿ ಕಚೇರಿಗೆ ಹೋಗಿರೋದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಕಚೇರಿಗೆ ಆಗಮಿಸಿದ ಸುಮಲತಾ ಅವ್ರನ್ನು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಮತ್ತು ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಮತ್ತಿತರರು ಸ್ವಾಗತಿಸಿದ್ರು.
ಬಿಜೆಪಿ ಕಚೇರಿ ಭೇಟಿ ಬಳಿಕ ಮಾತನಾಡಿದ ಸಂಸದೆ ಸುಮಲತಾ, ಚುನಾವಣೆಯಲ್ಲಿ ಸಹಕರಿಸಿದ ಬಿಜೆಪಿ ನಾಯಕರಿಗೆ ಧನ್ಯವಾದ ಹೇಳಲು ಬಿಜೆಪಿ ಕಚೇರಿಗೆ ಆಗಮಿಸಿದ್ದೇನೆ. ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.