ಕರ್ನಾಟಕ

ಕಾರ್ನಾಡ್ ವಿಧಿವಶ: ರಾಜ್ಯಾದ್ಯಂತ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ, 3 ದಿನ ಶೋಕಾಚರಣೆ!

Pinterest LinkedIn Tumblr

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಸೋಮವಾರ ವಿಧಿವಶರಾದ ಹಿನ್ನೆಲೆ ಗೌರವಾರ್ಥ ಒಂದು ದಿನ ಸರಕಾರಿ ರಜೆಯನ್ನು ಸಿಎಂ ಎಚ್‌ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಮುಂದಿನ ಮೂರು ದಿನಗಳ ವರೆಗೆ ಶೋಕಾಚರಣೆಯನ್ನು ಘೋಷಿಸಲಾಗಿದ್ದು ಸಭೆ ಸಮಾರಂಭಗಳನ್ನು ಮುಂದೂಡುವಂತೆ ಸೂಚಿಸಲಾಗಿದೆ.

ಸರಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಇರಲಿದೆ. ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಕಸ್ವಾಮಿ ತಿಳಿಸಿದ್ದಾರೆ.

ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

81 ವರ್ಷ ವಯಸ್ಸಾಗಿದ್ದ ಗಿರೀಶ್‌ ಕಾರ್ನಾಡ್‌ ಬೆಂಗಳೂರಿನ ಲ್ಯಾವಿಲ್ಲೆ ರಸ್ತೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರ್ನಾಡ್‌ ಅವರ ಅಂತ್ಯಸಂಸ್ಕಾರವನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಸಮೀಪ ಇರುವ ಕಲ್‌ಪಲ್ಲಿ ವಿದ್ಯುತ್‌ ಚಿತಾಗಾರದಲ್ಲಿ ನೆರವೇರಿಸಲು ಕುಟುಂಬ ನಿರ್ಧರಿಸಿದೆ. ಕಾರ್ನಾಡ್‌ ಕೋರಿಕೆ ಮೇರೆಗೆ ಯಾವುದೇ ಧರ್ಮದ ಸಂಪ್ರದಾಯವಿಲ್ಲದೆ ಸರಳವಾಗಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ.

Comments are closed.