ಕರ್ನಾಟಕ

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ; 1 ಬಲಿ

Pinterest LinkedIn Tumblr

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಭಾನುವಾರದಿಂದ ಭಾರೀ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಕೆಲವೆಡೆ ಮನೆಗಳು ಕುಸಿದಿರುವ ಬಗ್ಗೆ ವರದಿಯಾಗಿದೆ.

 

ಬೆಳಗಾವಿಯ ಯಕ್ಸಾಂಬಾದಲ್ಲಿ ಮಳೆ ನೀರು ಮನೆಗೆ ನುಗ್ಗಿದ ಪರಿಣಾಮ ವೃದ್ಧೆಯೊಬ್ಬಳು ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.

 

ಯಕ್ಸಾಂಬಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀರು ನುಗ್ಗಿ ಗರ್ಭಿಣಿಯರು ಮತ್ತು ರೋಗಿಗಳು ಪರದಾಡಬೇಕಾಯಿತು.

 

ಯಕ್ಸಾಂಬಾದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಹಳ್ಳ ಕೊಳ್ಳಗಳು ತುಂಬಿಕೊಂಡಿವೆ. ಅಪಯಕ್ಕೆ ಸಿಲುಕಿದ್ದ ಅಜ್ಜಿ ಮತ್ತು ಮೊಮ್ಮಗಳನ್ನು ರಕ್ಷಿಸಲಾಗಿರುವ ಬಗ್ಗೆ ತಿಳಿದು ಬಂದಿದೆ.

 

ಕೊಪ್ಪಳದ ಕಿನ್ನಾಳದಲ್ಲಿ ನಿರ್ಮಾಣ ಹಂತದ ಚೆಕ್‌ ಡ್ಯಾಂ ನಿರೀನಲ್ಲಿ ಕೊಚ್ಚಿ ಹೋಗಿದ್ದು,ಅಪಾರ ನಷ್ಟ ಸಂಭವಿಸಿದೆ.

 

ಹುಬ್ಬಳ್ಳಿಯಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿದು ಬೈಕ್‌ಗಳು ಕೊಚ್ಚಿ ಹೋಗಿವೆ.

 

Comments are closed.