
ಬೆಂಗಳೂರು: ಅಧಿವೇಶನ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ಶಾಸಕರಿಗೆ ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ಅವರು ವಿಪ್ ಜಾರಿ ಮಾಡಿದ್ದಾರೆ.
ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಶಾಸಕರು ಸದನದಲ್ಲಿ ಹಾಜರಿರಬೇಕು ಮತ್ತು ಸರ್ಕಾರದ ಪರವಾಗಿ ಮತ ಚಲಾಯಿಸಬೇಕು. ಒಂದು ವೇಳೆ ಸದನಕ್ಕೆ ಗೈರಾದರೆ ಅಥವಾ ಹಾಜರಿದ್ದು ಸರ್ಕಾರದ ಪರ ಮತ ಚಲಾಯಿಸದೆ ಇದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗುವುದು ಎಂದು ವಿಪ್ನಲ್ಲಿ ಸ್ಪಷ್ಟವಾಗಿ ತಿಳಿಸಿದೆ.
ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಇಂದು ಅತೃಪ್ತ 10 ಶಾಸಕರು ಖುದ್ದಾಗಿ ರಾಜೀನಾಮೆ ನೀಡಲು ಸ್ಪೀಕರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆಯೇ ಅತೃಪ್ತರ ಕೈಗೆ ವಿಪ್ ನೀಡಲು ಮುಖಂಡರು ಸಕಲ ತಯಾರಿ ನಡೆಸಿದ್ದಾರೆ.
ಸ್ಪೀಕರ್ ಇನ್ನು ರಾಜೀನಾಮೆಗಳನ್ನು ಅಂಗೀಕರಿಸಿಲ್ಲ. ಅದಕ್ಕೂ ಮುನ್ನವೇ ಅವರು ವಿಪ್ ನೀಡಿದರೆ, ಶಾಸಕರು ನಾಳೆ ಸದನಕ್ಕೆ ಹಾಜರಾಗಿ ಸರ್ಕಾರದ ಪರವಾಗಿ ಮತ ಚಲಾಯಿಸಲೇಬೇಕಾಗುತ್ತದೆ. ಇಲ್ಲವಾದಲ್ಲಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ. ಏತನ್ಮಧ್ಯೆ ಅತೃಪ್ತರಿಗೆ ಮುಖಂಡರು ಹೇಗೆ ವಿಪ್ಅನ್ನು ನೀಡಲಿದ್ದಾರೆ. ಸ್ಪೀಕರ್ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
Comments are closed.