ಬೆಂಗಳೂರು: ರಾಜಕೀಯವಾಗಿ ಬಿಜೆಪಿಗೆ ಸಕಾರಾತ್ಮಕ ಬೆಳವಣಿಗೆಗಳು ಆಗುತ್ತಿದ್ದು, ಮೂರ‍್ನಾಲ್ಕು ದಿನಗಳಲ್ಲಿ ಶುಭ ಸುದ್ದಿ ದೊರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹದಿನೈದು ಶಾಸಕರು ಈಗಾಗಲೇ ರಾಜೀನಾಮೆ ನೀಡಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂದರು.
ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಬಿಜೆಪಿ ಸರಕಾರ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸಮ್ಮಿಶ್ರ ಸರಕಾರ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೆ, ಸೋಮವಾರವೇ ವಿಶ್ವಾಸಮತ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸದನ ಕಲಾಪ ವ್ಯವಹಾರ ಸಮಿತಿ ಸಭೆ ಸೇರಿ ಸೋಮವಾರವೇ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕೆಂದು ಬಿಎಸ್ ಯಡಿಯೂರಪ್ಪ ಆಗ್ರಹಿಸಿದರು.
Comments are closed.