ಕರ್ನಾಟಕ

ಮುಂದಿನ ನಾಲ್ಕೈದು ದಿನದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಯಡಿಯೂರಪ್ಪ ವಿಶ್ವಾಸ

Pinterest LinkedIn Tumblr

ಬೆಂಗಳೂರು: ಗುರುವಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಫಲರಾಗುತ್ತಾರೆ. ಆರೂವರೆ ಕೋಟಿ ಜನರ ಆರ್ಶೀವಾದದೊಂದಿಗೆ ಇನ್ನು ನಾಲ್ಕೈದು ದಿನದಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಬರಬೇಕು ಅಂತಾ ನಾಡಿನ ಜನ ವ್ಯಕ್ತಪಡಿಸುತ್ತಿರುವ ಇಚ್ಛೆ ಗುರುವಾರ ಈಡೇರುತ್ತದೆ. ನೂರಕ್ಕೆ ನೂರು ಗುರುವಾರ ಅದು ಪೂರೈಸುತ್ತದೆ. ಯಾವುದೇ ಕಾರಣಕ್ಕೂ ವಿಶ್ವಾಸಮತದಲ್ಲಿ ಕುಮಾರಸ್ವಾಮಿ ಯಶಸ್ವಿಯಾಗುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ರೆಸಾರ್ಟ್ ನಲ್ಲಿ ಎಲ್ಲ ಶಾಸಕರ ಜತೆ ಸಮಾಲೋಚನೆ ನಡೆಸಲಾಗುವುದು. ಬಿಜೆಪಿಗೆ ರಿವರ್ಸ್ ಆಪರೇಶನ್ ಭಯವೇ ಇಲ್ಲ. ಸೋಮವಾರ ರಾತ್ರಿ ಶಾಸಕರೊಂದಿಗೆ ರೆಸಾರ್ಟ್ ನಲ್ಲಿ ಕಳೆಯುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಎಲ್ಲ ಬೆಳವಣೆಗೆಗಳ ನಡುವೆ ಬಿಜೆಪಿ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಗುರುವಾರ ನಡೆಯಲಿರುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸಬೇಕು ಎಂದು ಶಾಸಕರಿಗೆ ಸೂಚಿಸಲಾಗಿದೆ.

Comments are closed.