
ದಾವಣಗೆರೆ : ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರು ಬದುಕಿರುವಾಗಲೇ ಅವರ ಆತ್ಮಕ್ಕೆ ಶಾಂತಿ ಕೋರಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸುದ್ದಿ ಪೋಸ್ಟ್ ಮಾಡಿದ್ದಾರೆ ಎಂದು ಫೋಟೋ ವೈರಲ್ ಆಗಿದ್ದು, ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ರೇಣುಕಾಚಾರ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯ ಬದುಕಿದ್ದಾಗಲೇ ದ್ವಾರಕೀಶ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗೊಂಡ ದ್ವಾರಕೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ರೇಣುಕಾಚಾರ್ಯ ಫೋಟೋಗೆ ಶಾಂತಿ ಕೋರಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದ್ದಾರೆ.
ರೇಣುಕಾಚಾರ್ಯ ಫೇಸ್ಬುಕ್ ಪುಟದಲ್ಲಿ ಹಾಸ್ಯ ನಟ ಹಾಗೂ ನಿರ್ದೇಶಕ, ನಿರ್ಮಾಪಕ ಕರ್ನಾಟಕ ಪ್ರಿಯ ನಮ್ಮ ನಿಮ್ಮೆಲ್ಲರ ದ್ವಾರಕೀಶ್ ಇನ್ನಿಲ್ಲ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನು ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ವದಂತಿಯಿಂದ ದ್ವಾರಕೀಶ್ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಸ್ವತಃ ದ್ವಾರಕೀಶ್ ವೀಡಿಯೋ ಮಾಡಿ ದಯವಿಟ್ಟು ವದಂತಿಗಳನ್ನು ನಂಬಬೇಡಿ ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದರು.
Comments are closed.