
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನಿನ್ನೆ ರಾತ್ರಿಯಿಂದ ಸುರಿಯುತ್ತಿರೋ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಲೆನಾಡಿನ ನದಿಗಳಿಗೆ ಜೀವ ಕಳೆ ಬಂದಿದೆ
ಕಳೆದೊಂದು ವಾರದಿಂದ ಮಲೆನಾಡಲ್ಲಿ ಸಂಪೂರ್ಣ ಇಳಿಮುಖವಾಗಿದ್ದ ಮಳೆರಾಯ ನಿನ್ನೆ ರಾತ್ರಿಯಿಂದ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಇದರಿಂದ ಮಲೆನಾಡಿನ ನದಿಗಳಿಗೆ ಜೀವ ಕಳೆ ಬಂದಿದೆ. ಕುದುರೆಮುಖ, ಕೆರೆಕಟ್ಟೆ, ಶೃಂಗೇರಿ, ಮೂಡಿಗೆರೆ, ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಭಾರೀ ಮಳೆಯಾಗ್ತಿದ್ದು, ತುಂಗಾ-ಭದ್ರಾ-ಹೇಮಾವತಿ ನದಿಯ ಒಳಹರಿವಿನಲ್ಲೂ ಹೆಚ್ಚಾಗಿದೆ. ಶೃಂಗೇರಿಯಲ್ಲಿ ಭಾರೀ ಮಳೆಯಾಗ್ತಿದ್ದು, ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಲೆನಾಡು ಭಾಗ ಮಂಜಿನಿಂದ ಮುಚ್ಚಿಕೊಂಡಿದೆ
ಮಲೆನಾಡಿನ ಕೆಲವು ಭಾಗದಲ್ಲಿ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಅಲ್ಲಿಯೂ ಕೂಡ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆ ಕಂಡುಬಂದರೆ, ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು ಭಾಗ ಮಂಜಿನಿಂದ ಮುಚ್ಚಿಕೊಂಡಿದ್ದು, ಭಾರೀ ಮಳೆಯಿಂದಾಗಿ ತುಂಗಾ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.
Comments are closed.