
ನಗರದಲ್ಲಿ ರಾಜಕೀಯ ಬೃಹನ್ನಾಟಕಗಳು ಮುಂದುವರಿದಿರೋದರಿಂದ ಹಾಗೂ ಹಲವೆಡೆ ಕೈ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
ನಗರ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು, ಇಂದು ಸಂಜೆ 6 ಗಂಟೆಯಿಂದ 25 ತಾರೀಕು ಮಧ್ಯಾಹ್ನ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಇದರೊಂದಿಗೆ ನಗರದ ಎಲ್ಲ ಬಾರ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಪಬ್ಗಳು ಮತ್ತು ಮದ್ಯ ಮಾರಾಟಕ್ಕೂ ನಿಷೇಧ ಹೇರಿ ಇಲಾಖೆ ಆದೇಶ ಹೊರಡಿಸಿದೆ. ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮಾರಕಾಸ್ತ್ರಗಳನ್ನು ಸಂಗ್ರಹಿಸುವುದು, ಸಾಗಿಸುವುದಕ್ಕೆ ಪೊಲೀಸ್ ಇಲಾಖೆ ನಿಷೇಧ ಹೇರಿದೆ.
ಈ ಕುರಿತು ವಿವರಣೆ ನೀಡಿರುವ ಅಲೋಕ್ ಕುಮಾರ್, ನಗರದಲ್ಲಿ ಅಲ್ಲಲ್ಲಿ ಜನರು ಗುಂಪಾಗಿ ಸೇರುವುದು ಹಾಗೂ ಕಾನೂನು ಚಟುವಟಿಕೆಯಲ್ಲಿ ತೊಡಗಿರುವುದನ್ನು ಗಮನಿಸಿದ್ದೇವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಹೇರಲಾಗಿದೆ ಎಂದಿದ್ದಾರೆ.
Comments are closed.