ಕರ್ನಾಟಕ

ಆಟವಾಡುತ್ತಿದ್ದ ಬಾಲಕಿಯನ್ನ ಎಳೆದೊಯ್ದು ರೇಪ್ ಮಾಡಿದ 50ರ ಕಾಮುಕ

Pinterest LinkedIn Tumblr


ರಾಮನಗರ: ಕಾಮುಕನೊಬ್ಬ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನ ಎಳೆದೊಯ್ದು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಕನಕಪುರ ತಾಲೂಕಿನಲ್ಲಿ ನಡೆದಿದೆ.

ಕನಕಪುರ ತಾಲೂಕಿನ ಶಿಹಿರಾ(50) ಅತ್ಯಾಚಾರ ಎಸಗಿದ ಕಾಮುಕ. ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ತಮ್ಮ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅದೇ ಗ್ರಾಮದ ಶಿಹಿರಾ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕಣ್ಣೀರು ಹಾಕುತ್ತಾ ಮನೆಗೆ ಬಂದ ಬಾಲಕಿ ಪೋಷಕರಿಗೆ ಘಟನೆಯ ಬಗ್ಗೆ ಹೇಳಿಕೊಂಡಿದ್ದಾಳೆ. ತಕ್ಷಣವೇ ಪೋಷಕರು ಸಾತನೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಆರೋಪಿ ಶಿಹಿರಾನನ್ನು ಬಂಧಿಸಿದ ಸಾತನೂರು ಪೊಲೀಸ್ ಪೊಲೀಸರು, ಆತನ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಸಂತ್ರಸ್ತೆಯ ಪೋಷಕರು, ಗ್ರಾಮಸ್ಥರು ಶಿಹಿರಾ ವಿರುದ್ಧ ಸೂಕ್ತ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Comments are closed.