ಬೆಂಗಳೂರು: ಸಿಎಂ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ ಬಳಿಕ , 14 ತಿಂಗಳ ಕಾಲ ಆಡಳಿತ ನಡೆಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ಟ್ವಿಟರ್‌ನಲ್ಲಿ ತುಂಬು ಹೃದಯದ ಕೃತಜ್ಞತೆಗಳು ತಿಳಿಸಿದರು, ಇದೆ ವೇಳೆ ಮೈತ್ರಿ ಸರ್ಕಾರಕ್ಕೆ ಸಹಕಾರ ನೀಡಿದ್ದಕ್ಕೆ ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸಿದರು.
ಕಲಾಪ ಮುಗಿಯುತ್ತಿದ್ದಂತೆ ಸ್ಪೀಕರ್ ಭೇಟಿ ಮಾಡಿದ ಕುಮಾರಸ್ವಾಮಿ ಅವರು ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ಇದೇ ವೇಳೆ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಡಿಸಿಎಂ ಪರಮೇಶ್ವರ್, ಡಿ.ಕೆ ಶಿವಕುಮಾರ್, ಹೆಚ್ ಡಿ ರೇವಣ್ಣ ಜೊತೆಗಿದ್ದರು.
ರಾಜೀನಾಮೆ ಸ್ವೀಕರಿಸಿದ ನಂತರ ರಾಜ್ಯಪಾಲರು ಮುಂದಿನ ಸರ್ಕಾರ ಅಸ್ಥಿತ್ವಕ್ಕೆ ಬರುವವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಹೇಳಿದರು. ಬಿಜೆಪಿ ಬಹುಮತ ಸಾಬೀತು ಪಡಿಸಿ, ಅಧಿಕಾರಕ್ಕೆ ಬರುವವರೆಗೆ ಕುಮಾರಸ್ವಾಮಿ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಾರೆ.
Comments are closed.