ಕರ್ನಾಟಕ

ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆಗೆ ಏರಬೇಕು ಎಂಬುದು ರಾಜ್ಯದ ಏಳೂವರೆ ಕೋಟಿ ಕನ್ನಡಿಗರ ಅಪೇಕ್ಷೆಯಾಗಿತ್ತು: ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರ ತೊಲಗಬೇಕು, ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆಗೆ ಏರಬೇಕು ಎಂಬುದು ರಾಜ್ಯದ ಏಳೂವರೆ ಕೋಟಿ ಕನ್ನಡಿಗರ ಅಪೇಕ್ಷೆಯಾಗಿತ್ತು ಎಂದು ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ರಾಜಭನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಇಂದು ಸಂಜೆ 6 ರಿಂದ 6.15ರ ಒಳಗಾಗಿ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿ ಪಕ್ಷದ ಹಿರಿಯ ಮುಖಂಡರಾದ ಶ್ಯಾಮ್ ಪ್ರಸಾದ್ ಮುಖರ್ಜಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,

“ಕನ್ನಡಿಗರ ಒತ್ತಾಸೆಯಂತೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಬೆಳಗ್ಗೆ 8 ಗಂಟೆಗೆ ಕೇಂದ್ರದಿಂದ ಸೂಚನೆ ಬಂದಿತ್ತು. ಇಂದೇ ನೀವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು. ಹೀಗಾಗಿ ಇಂದು ಸಂಜೆ 6 ಗಂಟೆಗೆ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, “ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಸಂಜೆ 7 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲಿದ್ದೇನೆ. ಈ ಸಭೆಯಲ್ಲಿ ರೈತರ ಹಾಗೂ ನೀರಾವರಿ ಸಮಸ್ಯೆ ಸೇರಿದಂತೆ ರಾಜ್ಯದ ಎಲ್ಲಾ ಪ್ರಸ್ತುತ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಲಿದ್ದೇನೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಇದೆ. ಹೀಗಾಗಿ ಕೇಂದ್ರದ ನೆರವಿನ ಜೊತೆ ಉತ್ತಮ ಆಡಳಿತ ನೀಡುತ್ತೇನೆ. ಕೇವಲ ಮೂರು ತಿಂಗಳಲ್ಲಿ ಹಿಂದಿನ ಸರ್ಕಾರ ಮತ್ತು ನಮ್ಮ ಸರ್ಕಾರ ಹೇಗೆ ಕೆಲಸ ಮಾಡಿದೆ ಅನ್ನೋದು ಜನ ಕುಂತಲ್ಲಿ ನಿಂತಲ್ಲಿ ಮಾತಾಡಬೇಕು ಹಾಗೆ ಕೆಲಸ ಮಾಡಿ ತೋರಿಸುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Comments are closed.