
ಬೆಂಗಳೂರು: ಅಧಿಕಾರಕ್ಕೆ ಬಂದ ಗಂಟೆಯಲ್ಲಿ ನೇಕಾರರ ಸುಮಾರು 100 ಕೋಟಿ ಸಾಲ ಮಾಡಿದ್ದ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಇದೀಗ ಮೀನುಗಾರರ ಸಾಲವನ್ನು ಮನ್ನಾ ಮಾಡುವ ಮೂಲಕ ಅವರಿಗೆ ಸಿಹಿ ಸುದ್ದಿ ನೀಡಿದ್ದಾರೆ.
2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಿಂದ 60 ಕೋಟಿ ರೂ. ಸಾಲ ಪಡೆದಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಮೀನುಗಾರರ ಸಾಲ ಮನ್ನಾ ಮಾಡುವ ತೀರ್ಮಾನವನ್ನು ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ತೆಗೆದುಕೊಂಡಿದ್ದಾರೆ.
ಇದನ್ನು ಓದಿ: ನೇಕಾರರ ಸಾಲ ಮನ್ನಾ, ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ಸಹಾಯಧನ; ನೂತನ ಸಿಎಂ ಬಿಎಸ್ವೈ ಘೋಷಣೆ
ಮೌನ್ನೆ ಸಿಎಂ ಆಗಿ ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯ ನೇಕಾರರ ಸುಮಾರು 100 ಕೋಟಿ ಸಾಲವನ್ನು ಮನ್ನಾ ಮಾಡಿದ್ದರು.
Comments are closed.