ಕರ್ನಾಟಕ

ಐಎಂಎ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್‌ ನ್ಯಾಯಾಂಗ ಬಂಧನ ಆ.14ರವರೆಗೆ ವಿಸ್ತರಣೆ

Pinterest LinkedIn Tumblr

ಬೆಂಗಳೂರು: ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಐಎಂಎ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್‌ನನ್ನು ಇಂದು ಜಾರಿ ನಿರ್ದೇಶನಾಲಯ ಅಧಿಖಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿ ಮನ್ಸೂರ್ ಖಾನ್‌ನ ಜಾರಿ ನಿರ್ದೇಶನಾಲಯದ ಕಸ್ಟಡಿ ಇಂದು ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಇ.ಡಿ.ಅಧಿಕಾರಿಗಳು ಆತನನ್ನು ಇಂದು ಇ.ಡಿ.ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆತನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗುತ್ತದೆ.

ಈ ಮಧ್ಯೆ, ಜೀವ ಬೆದರಿಕೆ ಹಿನ್ನೆಲೆಯಲ್ಲಿ ಐಎಂಎ ಸಮೂಹ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್ ಭದ್ರತೆಗೆ ಕೇಂದ್ರೀಯ ಮೀಸಲು ಪಡೆಯ ಯೋಧರನ್ನು ನಿಯೋಜಿಸಲಾಗಿದೆ. ಜಾರಿ ನಿರ್ದೇಶನಾಲಯ (ಇ.ಡಿ.) ವಶದಲ್ಲಿರುವ ಮನ್ಸೂರ್ ಖಾನ್ ವಿಚಾರಣೆ ವೇಳೆ ತನಗೆ ಜೀವ ಭಯ ಇರುವುದಾಗಿ ಹಾಗೂ ಮುಂಬೈನ ಶಾರ್ಪ್‍ಶೂಟರ್‌ಗಳು ತನ್ನ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಅಧಿಕಾರಿಗಳು ಮನ್ಸೂರ್ ಭದ್ರತೆಗಾಗಿ ಇಬ್ಬರು ಸಿಆರ್‌ಪಿಎಫ್ ಇನ್ಸ್ ಪೆಕ್ಟರ್‌ಗಳ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ನಿಯೋಜನೆ ಮಾಡಿದ್ದಾರೆ.

ಈ ಮಧ್ಯೆ, ಐಎಂಎ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಖಾನ್‌ನನ್ನು ವಶಕ್ಕೆ ಪಡೆಯಲು ನ್ಯಾಯಾಲಯದ ಮೊರೆ ಹೋಗಿದೆ.

Comments are closed.