ಕರ್ನಾಟಕ

ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್’ರನ್ನು ರಹಸ್ಯವಾಗಿ ಭೇಟಿ ಮಾಡಿದ ಅನರ್ಹ ಶಾಸಕ ಮುನಿರತ್ನ; ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ

Pinterest LinkedIn Tumblr

ಬೆಂಗಳೂರು: ಕಾಂಗ್ರೆಸ್​ ಪಕ್ಷದಿಂದ ಉಚ್ಚಾಟನೆಗೊಂಡಿರುವ ಅನರ್ಹ ಶಾಸಕ ಮುನಿರತ್ನ, ಮಾಜಿ ಸಚಿವ ಕಾಂಗ್ರೆಸ್​ ಹಿರಿಯ ನಾಯಕ ಡಿ.ಕೆ. ಶಿವಕುಮಾರ್​ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮಂಗಳವಾರ ರಾತ್ರಿ ಖಾಸಗಿ ಹೋಟೆಲ್​ವೊಂದರಲ್ಲಿ ಡಿ.ಕೆ. ಶಿವಕುಮಾರ್​ ಅವರನ್ನು ಮುನಿರತ್ನ ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಅವರು ಮುಂಬೈನಲ್ಲಿ ನಡೆದ ಎಲ್ಲಾ ಬೆಳವಣಿಗೆಗಳ ವಿವರನ್ನು ಡಿಕೆಶಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮುನಿರತ್ನ ಇತರ 13 ಶಾಸಕರೊಂದಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದರು. ಆ ನಂತರ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ಅವರು ರಾಜೀನಾಮೆ ನೀಡಿದ್ದ ಕಾಂಗ್ರೆಸ್​ನ 14 ಮತ್ತು ಜೆಡಿಎಸ್​ನ 3 ಶಾಸಕರನ್ನು ಅನರ್ಹಗೊಳಿಸಿದ್ದರು. ಅನರ್ಹತೆ ಶಿಕ್ಷೆಗೊಳಗಾದ ಬೆನ್ನಲ್ಲೇ ಅನರ್ಹ ಶಾಸಕರನ್ನು ಕಾಂಗ್ರೆಸ್​ ಪಕ್ಷದಿಂದ ಉಚ್ಚಾಟನೆ ಮಾಡಿ ಎಐಸಿಸಿ ಆದೇಶ ಹೊರಡಿಸಿತ್ತು. ಕಾಂಗ್ರೆಸ್​ ಪಕ್ಷದ ಆದೇಶ ಹೊರಬಿದ್ದ ಬೆನ್ನಲ್ಲೇ ಜೆಡಿಎಸ್​ ಸಹ ಅನರ್ಹಗೊಂಡಿರುವ 3 ಶಾಸಕರನ್ನು ಉಚ್ಚಾಟನೆ ಮಾಡಿ ಆದೇಶಿಸಿತ್ತು.

Comments are closed.