ಕರ್ನಾಟಕ

ಆರ್​. ಅಶೋಕ್​ ಕುರಿತು ಅಮಿತ್​ ಶಾ ಪತ್ರ ಬರೆದಿದ್ದು ಏಕೆ ಗೊತ್ತಾ?

Pinterest LinkedIn Tumblr


ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ನೇರವಾಗಿ ಹಾಗೂ ಪರೋಕ್ಷವಾಗಿ ಕಾರಣವಾಗಿರೋದಕ್ಕೆ ಬಿಜೆಪಿ ಕಡೆಯಿಂದ ಅಭಿನಂದನ ಪತ್ರ ಬರೆಯಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತು 303ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಚುನಾವಣೆ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಶ್ಲಾಘಿಸಿ ಪಕ್ಷದ ರಾಷ್ಟ್ರಾಧ್ಯಕ್ಷರಾದ @AmitShahಜೀ ನಮಗೆ ಅಭಿನಂದನಾ ಪತ್ರ ಕಳುಹಿಸಿರುವುದು ಹರ್ಷ ತಂದಿದೆ. ಈ ಅಭಿನಂದನೆ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು pic.twitter.com/pItvCNnDJW

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದ ಆರ್.​ ಅಶೋಕ್​ ಅವರ ಕಾರ್ಯಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರು ಪಕ್ಷದವತಿಯಿಂದ ಗೌರವಪೂರ್ವಕವಾಗಿ ಅಭಿನಂದನೆಯನ್ನು ಪತ್ರದ ಮೂಲಕ ರವಾನಿಸಿದ್ದಾರೆ.

ಅಲ್ಲದೇ ರಾಜ್ಯದಲ್ಲೂ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕೆಂದು ಅಮಿತ್ ಶಾ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸದ್ಯ ಈ ಪತ್ರಕ್ಕೆ ಸಂಭ್ರಮ ವ್ಯಕ್ತಪಡಿಸಿರುವ ಆರ್.ಅಶೋಕ್ ಅವರು, ಅಮಿತ್ ಶಾ ಹೇಳಿರುವ ಅಭಿನಂದನೆ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಎಂದು ಪ್ರತಿಕ್ರಿಯೆ ನೀಡಿದ್ದು ಈ ವಿಷಯವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Comments are closed.