ಕರ್ನಾಟಕ

ಮಹಾ ಮಳೆ: ಧಾರವಾಡ-ವಿಜಯಪುರ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ

Pinterest LinkedIn Tumblr


ಬಾಗಲಕೋಟೆ: ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.

ಕೃಷ್ಣಾ ನದಿಗೆ 2.60 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಮಖಂಡಿ ತಾಲೂಕಿನ 7 ಗ್ರಾಮಗಳ ಸುತ್ತ ಸುತ್ತುವರೆದ ನೀರಿನ ಪ್ರಮಾಣವೂ ಹೆಚ್ಚಳವಾಗಿದೆ.

ಆಲಗೂರ ಗ್ರಾಮದ ಗೌಡರ ಗಡ್ಡೆ ತೋಟದ ವಸತಿಗೆ ನೀರು ನುಗ್ಗಿದ್ದು, ಸುಮಾರು 80 ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮಹಾರಾಷ್ಟ್ರದ ಕೊಯ್ನಾ ಜಲಾಶಯ ವ್ಯಾಪ್ತಿ, ಅಂಬೋಲಿ, ಅಜರಾ ಪ್ರದೇಶ, ಮಲಪ್ರಭಾ ನದಿಯ ಉಗಮ ಸ್ಥಾನ ಖಾನಾಪುರದ ಕಣಕುಂಬಿ ಅರಣ್ಯದಲ್ಲಿ ಧಾರಾಕಾರ ಮಳೆಯಿಂದ ನೀರು ಹರಿದು ಬರುತ್ತಿದೆ.

Comments are closed.