ಕರ್ನಾಟಕ

ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ನಿಂದ ಮಾಸ್ಟರ್​ ಸ್ಟ್ರೋಕ್!

Pinterest LinkedIn Tumblr


ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ದಿನದಿನಕ್ಕೆ ಹೆಚ್ಚಾಗಿದ್ದು ಆ ಭಾಗದ ಜನರ ಸಮಸ್ಯೆಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಜೆಡಿಎಸ್​ ಟ್ವೀಟರ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಅತೃಪ್ತರು ಮುಂಬೈಗೆ ತೆರಳಿದ್ದರು ಆಗ ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸಿದಿರಿ. ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದಾರೆ ಆದರೆ ಒಂದೇ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ!

ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!#KarnatakaFloods

— Janata Dal Secular (@JanataDal_S) August 8, 2019

ಇನ್ನು ಅತೃಪ್ತರಿಗೆ ಮುಂಬೈನಲ್ಲಿ ಫೈವ್ ಸ್ಟಾರ್ ಹೊಟೇಲ್ ಮಾಡಿದಿರಿ, ಸಂತ್ರಸ್ಥರಿಗೆ ಒಂದು ಗಂಜಿ ಕೇಂದ್ರವನ್ನ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಟ್ವೀಟರ್​ ಮೂಲಕ ವಾಗ್ದಾಳಿ ನಡೆಸಲಾಗಿದೆ.

ಸದ್ಯ ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಆ ಪ್ರದೇಶದಲ್ಲಿ ಕೆರೆ-ಕಟ್ಟೆಗಳು, ಡ್ಯಾಮ್​ಗಳು, ನದಿಗಳು ತುಂಬಿ ಹರಿಯುತ್ತಿದ್ದು ಆ ಭಾಗದ ಜನರಿಗೆ ಸಂಕಷ್ಟ ಎದುರಾಗಿದೆ. ಹಲವು ಜನರು ಮನೆ ಕಳೆದುಕೊಂಡಿದ್ದಾರೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್​ ಯಡಿಯೂರಪ್ಪ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಆದರೆ ಯಾವುದೇ ಸಚಿವರು ಪ್ರಮಾಣವಚನ ಸ್ವೀಕರಿಸಿಲ್ಲ, ಜನರ ಸಮಸ್ಯೆಗೆ ಆಯಾ ಜಿಲ್ಲೆಯ ಡಿಸಿಗಳೇ ಸ್ಪಂದಿಸಲು ಮುಂದಾಗಿದ್ದಾರೆ.

Comments are closed.