ಕರ್ನಾಟಕ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸರ್ಕಾರಿ ನೌಕರರಿಂದ 1 ದಿನದ ವೇತನ ನೀಡಲು ನಿರ್ಧಾರ

Pinterest LinkedIn Tumblr


ಬೆಂಗಳೂರು: ಅತಿವೃಷ್ಟಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ, ಮಳೆಯಿಂದ ನೂರಾರು ಹಳ್ಳಿಗಳು ಜಲಾವೃತಗೊಂಡಿದ್ದು, ಜನರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ 5.40 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿದ್ದು, ಒಂದು ದಿನದ ವೇತನ ಸುಮಾರು 150 ಕೋಟಿ ರೂ.ಗಳನ್ನು ಪರಿಹಾರ ನಿಧಿಗೆ ನೀಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಿಎಂ ಗಮನಕ್ಕೆ ತಂದು ನಿರ್ಧಾರ ಪ್ರಕಟಿಸಲಾಗುವುದು ಎಂದರು.

Comments are closed.