ಬೆಂಗಳೂರು: ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂ. ಗಳಿಗೂ ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು. ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ನೆರೆ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂ. ಗಳಿಗೂ ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಆ ಗ್ರಾಮಕ್ಕೆ ಹೆಸರು ಇಡಲಾಗುವುದು. ಇದಕ್ಕಾಗಿ ಗ್ರಾಮಗಳ ಹೆಸರನ್ನು ಬದಲಾಯಿಸಲಾಗುವುದು ಎಂದು ಸುದ್ದಿಯಾಗಿತ್ತು. ಇದಕ್ಕೆ ಸ್ಪಷ್ಟೀಕರಣ ನೀಡಿದ ಮುಖ್ಯಮಂತ್ರಿಗಳು ಅಲ್ಲಿ ನೂತನವಾಗಿ ನಿರ್ಮಿಸುವ ಬಡಾವಣೆಗಳಿಗೆ ಮಾತ್ರ ಸಂಸ್ಥೆಯ ಹೆಸರಿಡಲಾಗುವುದು ಎಂದಿದ್ದಾರೆ.
Comments are closed.