ಕರ್ನಾಟಕ

ಕನ್ನಡ ಪರ ಹೋರಾಟಗಾರರನ್ನು ಬಂಧಿಸಿರುವುದಕ್ಕೆ ಖಂಡನೆ; ನಿಮ್ಮ ಪೌರುಷ ಕೇಂದ್ರದಿಂದ ನೆರೆ ಪರಿಹಾರ ಪಡೆಯಲು ತೋರಿಸಿ: ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಎಚ್‌ಡಿಕೆ

Pinterest LinkedIn Tumblr

ಬೆಂಗಳೂರು: ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಿಸಿರುವ ಮೊಕದ್ದಮೆ ಹಿಂಪಡೆಯುವಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.

‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎನ್ನುವ ಘೋಷಣೆಯೊಂದಿಗೆ ಚಟುವಟಿಕೆ ನಡೆಸುತ್ತಿರುವ ಕನ್ನಡ ಸಂಘಟನೆಗಳ ಸದಸ್ಯರು ಜೈನ್‌ ದೇವಾಲಯವೊಂದರಲ್ಲಿ ಹಾಕಿದ್ದ ಹಿಂದಿ ಬ್ಯಾನರ್‌ ಕಿತ್ತುಹಾಕಿದ ಆರೋಪದ ಮೇಲೆ ಬಂಧನಕ್ಕೆ ಒಳಪಟ್ಟಿರುವ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಸಾಮಾಜಿಕ ತಾಣಗಳಲ್ಲಿ ತೀವ್ರ ಒತ್ತಡ ಕೇಳಿಬಂದಿದೆ.

ಕನ್ನಡ ಪರ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿರುವ ಎಚ್‌ಡಿ ಕುಮಾರಸ್ವಾಮಿ, ನಿಮ್ಮ ಪೌರುಷವನ್ನು ಕೇಂದ್ರ ಸರಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ್ದಾರೆ.

ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ. ಹರೀಶ್‌ ಕುಮಾರ್‌, ಪದಾಧಿಕಾರಿಗಳಾದ ಮಂಜು, ಚಂದ್ರಶೇಖರ್‌, ಕರ್ನಾಟಕ ರಕ್ಷಣಾ ವೇದಿಕೆಯ ಅಂಜನಪ್ಪ, ರಕ್ಷಣಾ ಸೇನೆಯ ರಮೇಶ್‌ ಗೌಡ ಹಾಗೂ ಕರುನಾಡ ಸೇವಕರು ವೇದಿಕೆಯ ಮಾದೇಶ್‌ ಗೌಡ ಬಂಧಿತರು.

Comments are closed.