ಕರ್ನಾಟಕ

ಖಾತೆ ಹಂಚಿಕೆ ನಡುವೆ ಯಡಿಯೂರಪ್ಪಗೆ ಮತ್ತೊಂದು ಶಾಕ್

Pinterest LinkedIn Tumblr


ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ 17 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಖಾತೆ ಹಂಚಿಕೆಗಾಗಿ ಹಗ್ಗಜಗ್ಗಾಟ ನಡೆಯುತ್ತಿರುವ ಮಧ್ಯೆಯೇ ರಾಜ್ಯದಲ್ಲಿ ಮೂವರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಪ್ರಬಲವಾಗಿರುವ ದಲಿತ, ಕುರುಬ ಹಾಗೂ ಒಕ್ಕಲಿಗ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೈಕಮಾಂಡ್ ಮುಂದೆ ಪ್ರಸ್ತಾಪವನ್ನಿಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಬಿಜೆಪಿ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶನಿವಾರ ಬೆಳಗ್ಗೆ ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಕೆಲ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆನ್ನಲಾಗಿದೆ.

ಕುರುಬ ಕೋಟಾದಲ್ಲಿ ಬಿಎಸ್ ಯಡಿಯೂರಪ್ಪ, ಒಕ್ಕಲಿಗ ಕೋಟಾದಲ್ಲಿ ಆರ್.ಅಶೋಕ್ ಅಥವಾ ಡಾ.ಅಶ್ವಥ್ ನಾರಾಯಣ್, ದಲಿತ ಕೋಟಾದಲ್ಲಿ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೇ ಡಿಸಿಎಂ ಹುದ್ದೆಗೆ ಶೆಟ್ಟರ್, ಶ್ರೀರಾಮುಲು ಸೇರಿದಂತೆ ಕೆಲವರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

Comments are closed.