ಕರ್ನಾಟಕ

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಭಾರಿ ಹಾನಿ: ಕೇಂದ್ರ ಅಧ್ಯಯನ ತಂಡ

Pinterest LinkedIn Tumblr


ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಭಾರಿ ಪ್ರಮಾಣದ ಹಾನಿಯಾಗಿದೆ ಎಂದು ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಕುಂದಾನಗರಿ ಬೆಳಗಾವಿಯ ನೆರೆ ಪೀಡಿತ ಪ್ರದೇಶಗಳಾದ ಚಿಕ್ಕೋಡಿ, ರಾಯಭಾಗ, ಗೋಕಾಕ ಹಾಗೂ ಅಥಣಿ ತಾಲೂಕಿನ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ, ಪರಿಶೀಲಿಸಿದ ನಂತರ ಸುದ್ದಿಗಾರರಿಗೆ ಪ್ರಕಾಶ್‌ ಈ ಮಾಹಿತಿ ತಿಳಿಸಿದರು.

ಕೇಂದ್ರದಿಂದ ಅಗತ್ಯ ಪರಿಹಾರದ ಮೊತ್ತ ಬಿಡುಗಡೆಗಾಗಿ ಆದಷ್ಟು ಶೀಘ್ರ ವರದಿ ಸಲ್ಲಿಸಲಾಗುವುದು. ಪ್ರವಾಹದ ಹಾನಿಯ ಬಗ್ಗೆ ರಾಜ್ಯ ಸರಕಾರ ಮನವಿ ಆಧರಿಸಿ, ಕೇಂದ್ರ ತಂಡ ಮತ್ತೊಮ್ಮೆ ಪರಿಶೀಲನೆ ನಡೆಸಲಿದೆ ಎಂದರು.

ಇದಕ್ಕೂ ಮುನ್ನ ಬೆಳಗಾವಿಯ ಸರ್ಕೀಟ್ ಹೌಸ್‌ನಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕೇಂದ್ರ ತಂಡ ಅಗತ್ಯ ಮಾಹಿತಿ ಪಡೆದುಕೊಂಡಿತು. ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಕೇಂದ್ರ ತಂಡಕ್ಕೆ ಅಗತ್ಯ ಮಾಹಿತಿ ನೀಡಿದರು.

ರಾಜ್ಯದಲ್ಲಿ ನೆರೆ ಪರಿಸ್ಥಿತಿ ಅಧ್ಯಯನ ನಡೆಸಲು ಶನಿವಾರ ಆಗಮಿಸಿದ ಕೇಂದ್ರ ತಂಡ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪೂರ್ವಭಾವಿ ಮಾತುಕತೆ ನಡೆಸಿತ್ತು.

Comments are closed.