
ಬೆಂಗಳೂರು: ಸಿಎಂ ಬಿಎಸ್‍ವೈ ನೇತೃತ್ವದ ಸರ್ಕಾರದ ಸಂಪುಟ ಖಾತೆ ಹಂಚಿಕೆ ಹಾಗೂ ಡಿಸಿಎಂ ಸ್ಥಾನಗಳ ಘೋಷಣೆಯಾಗುತ್ತಿದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕೆಎಸ್ ಈಶ್ವರಪ್ಪ ಪರ ರಾಯಣ್ಣ ಬ್ರಿಗೇಡ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರೆ, ಶ್ರೀರಾಮುಲು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್, ಈಶ್ವರಪ್ಪರಿಗೆ ಡಿಸಿಎಂ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಭಾರೀ ಹೊಡೆತ ನೀಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಲ್ಲದೇ ಕೆಎಸ್ ಈಶ್ವರಪ್ಪ ಅವರನ್ನು ಕಡೆಗಣಿಸುವ ಮೂಲಕ ಹಿಂದುಳಿದ ವರ್ಗದವರಿಗೆ ಅಪಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಸಾಮಾಜಿ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಶ್ರೀರಾಮುಲು ಅಭಿಮಾನಿಗಳು, ಡಿಸಿಎಂ ಹುದ್ದೆ ಕೇಳಿದ್ದು ಶ್ರೀರಾಮುಲು ಒಬ್ಬರೇ. ಆದರೆ ಡಿಸಿಎಂ ಹುದ್ದೆ ಕೇಳದವರಿಗೆ ಆ ಸ್ಥಾನ ನೀಡಲಾಗಿದೆ. 80 ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಶ್ರೀರಾಮುಲು ಪ್ರಚಾರ ಮಾಡಿದ್ದು, ವಾಲ್ಮೀಕಿ ಸಮುದಾಯಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡಲಾಗಿದೆ. ಈ ಜಾತಿ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ರಾಮುಲು ಅವರಿಗೆ ಡಿಸಿಎಂ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments are closed.