
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಬಿಜೆಪಿ ಸರಕಾರ ಆಪರೇಷನ್ ಕಮಲದ ಅನೈತಿಕ ಕೂಸು. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ ಎಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’.
ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು.
ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯತೀತ ಶಕ್ತಿಯಲ್ಲ ಎಂದು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Comments are closed.