ಕರ್ನಾಟಕ

ಟ್ರಬಲ್​​ ಶೂಟರ್​​ ಶೇವಿಂಗ್​ ಗೆ ಅನುಮತಿ ನೀಡುವಂತೆ ಕೋರಿದ ವಕೀಲರು

Pinterest LinkedIn Tumblr


ಬೆಂಗಳೂರು(ಸೆ.07): ಅಕ್ರಮ ಹಣಕ್ಕೆ ಸಂಬಂಧಿಸಿದ ಅವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಾಂಗ್ರೆಸ್​​ ನಾಯಕ ಡಿ.ಕೆ ಶಿವಕುಮಾರ್​​ರನ್ನು ಬಂಧಿಸಿದೆ. ಕಳೆದ ಮೂರು ದಿನಗಳಿಂದ ಇಡಿ ಅಧಿಕಾರಿಗಳು, ಡಿ.ಕೆ ಶಿವಕುಮಾರ್​​ರನ್ನು ​ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಇಡಿ ವಶದಲ್ಲಿರುವ ಕಾಂಗ್ರೆಸ್​ನ ಟ್ರಬಲ್​​ ಶೂಟರ್​​ ಶೇವಿಂಗ್​ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕೋರಿ ಇ.ಡಿ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್​​​ 4ರಂದು ಕೋರ್ಟ್​ ಆದೇಶದ ಮೇರೆಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಕಳೆದ ಮೂರು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು. ಡಿಕೆಶಿಯನ್ನು ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ. ಈ ವೇಳೆ ಶುಕ್ರವಾರ ಸಂಜೆ ಶೇವ್​ ಮಾಡಿಕೊಳ್ಳಲು ಅವಕಾಶ ನೀಡುವಂತೆ ಡಿಕೆಶಿ ಕೋರಿದ್ದರು. ಆದರೆ, ಇದಕ್ಕೆ ಅಧಿಕಾರಿಗಳು ನಿರಾಕರಿಸಿದ್ದರು. ಹೀಗಾಗಿ ಡಿಕೆಶಿ ಪರ ವಕೀಲರು ಇಡಿ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಶೇವಿಂಗ್​ ಕಿಟ್​ ಜತೆಗೆ ಪೆನ್​ ಮತ್ತು ಪೇಪರ್​ ಬಳಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಸದ್ಯ ಡಿಕೆಶಿ ಪರ ವಕೀಲರ ಮನವಿಗೆ ಕೋರ್ಟ್​ ಸ್ಪಂದಿಸಿದೆ. ತಾವು ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಲಿದ್ದೇವೆ. ಶೇವ್​​ ಮಾಡಿಕೊಳ್ಳಲು ಅನುಮತಿ ನೀಡುವವರೆಗೂ ಕಾಯಿರಿ ಎಂದು ಕೋರ್ಟ್​ ತಿಳಿಸಿದೆ.

ತಾಯಿ, ಪತ್ನಿ ಸೇರಿ ಇತರರ ಹೆಸರಲ್ಲಿ ಶಿವಕುಮಾರ್ ಬೇನಾಮಿ ಆಸ್ತಿ ಮಾಡಿರುವುದು ಕಂಡು ಬಂದಿದೆ. ಈ ಬಗ್ಗೆ ಇಡಿ ಅಧಿಕಾರಿಗಳ ವಿಚಾರಣೆ ಮುಂದುವರಿದಿದೆ. ಇಡಿ ತನಿಖೆ ಮುಗಿದ ಬಳಿಕ ಸರ್ಕಾರ ಅಧಿಕೃತವಾಗಿ ಮುಟ್ಟಗೋಲು ಹಾಕಿಕೊಳ್ಳಲಿದೆ. ಈ ಹಿಂದೆ 2017ರ ಆಗಸ್ಟ್​ನಲ್ಲಿ ಐಟಿ ಅಧಿಕಾರಿಗಳು ಶಿವಕುಮಾರ್ ಮೇಲೆ ನಡೆಸಿದ ದಾಳಿ ವೇಳೆ ಸುಮಾರು 400 ಕೋಟಿ ರೂ.ಗೂ ಅಧಿಕ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿತ್ತು. ಆ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿದಾಗ ಹಲವರ ಹೆಸರಲ್ಲಿ ಆಸ್ತಿ ಮಾಡಿರುವುದು ಬೆಳಕಿಗೆ ಬಂದಿತ್ತು ಎನ್ನುತ್ತಿವೆ ಮೂಲಗಳು.

ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ: ಕೇಂದ್ರ ಸರ್ಕಾರ 2016ರಲ್ಲಿ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿಗೆ ತಂದಿತ್ತು. ಬೇನಾಮಿ ಆಸ್ತಿ ಹೊಂದಿದ್ದರೆ ಅಂಥವರಿಗೆ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಪ್ರಕಾರ ಭಾರಿ ಪ್ರಮಾಣದ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ. ಈ ಕಾಯ್ದೆ ಪ್ರಕಾರ 1 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿರುವುದು ಪತ್ತೆಯಾದರೆ 7 ವರ್ಷ ಜೈಲು ಶಿಕ್ಷೆ ಮತ್ತು 25 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಅಲ್ಲದೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿದೆ. ಬೇನಾಮಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ಕೊಟ್ಟಿರುವುದು ಕಂಡು ಬಂದರೆ ಪ್ರಸ್ತುತ ಆ ಆಸ್ತಿಗೆ ಇರುವ ಬೆಲೆಯ ಶೇ.10 ದಂಡ ವಿಧಿಸಿ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

Comments are closed.