ಕರ್ನಾಟಕ

ಈಗ ಕೊಟ್ಟಿರುವ 10 ಸಾವಿರ ಪರಿಹಾರವೇ ಹೆಚ್ಚಾಗಿದ್ದು, ಇದಕ್ಕಿಂತ ಹೆಚ್ಚು ಕೊಡಲು ಸಾಧ್ಯವಿಲ್ಲ ಎಂದ ಈಶ್ವರಪ್ಪ ಕಾರಿಗೆ ಮುತ್ತಿಗೆ ಹಾಕಿದ ನೆರೆ ಸಂತ್ರಸ್ತರು

Pinterest LinkedIn Tumblr

ಬೆಳಗಾವಿ: ಪ್ರಸ್ತುತ ಕೊಡುತ್ತಿರುವ ಪರಿಹಾರವೇ ಹೆಚ್ಚಾಗಿದ್ದು, ಇದಕ್ಕಿಂತ ಹೆಚ್ಚು ಕೊಡಲು ಸಾಧ್ಯವಿಲ್ಲ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ.

ಹೆಚ್ಚಿನ ಪರಿಹಾರ ನೀಡುವಂತೆ ಕೃಷ್ಣಾ ನದಿ ಪ್ರವಾಹ ಪೀಡಿತ ಸಂತ್ರಸ್ತರು ಮಾಡಿದ ಮನವಿಗೆ ಪ್ರತಿಕ್ರಿಯೆ ನೀಡಿದ್ದ ಈಶ್ವರಪ್ಪ ಅವರು, ಸುಮ್ಮನೆ ಹೋಗಿ. ಈಗಾಗಲೇ ನಾವು ರೂ.10,000 ಪರಿಹಾರವನ್ನು ನೀಡಿದ್ದೇವೆ. ಇದೇ ಹೆಚ್ಚಾಗಿದ್ದು, ಇದಕ್ಕಿಂತಲೂ ಹೆಚ್ಚು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಈಶ್ವರಪ್ಪ ಹೇಳಿಕೆಗೆ ನೊಂದ ಸಂತ್ರಸ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂತ್ರಸ್ತರನ್ನು ಸಮಾಧಾನಪಡಿಸುವಷ್ಟರಲ್ಲಿ ಹೈರಾಣಾಗಿ ಹೋಗಿದ್ದಾರೆ.

Comments are closed.