ಕರ್ನಾಟಕ

ಪೆಟ್ರೋಲ್​​-ಡೀಸೆಲ್​​ ಬೆಲೆಯಲ್ಲಿ ಇಳಿಕೆ ! ಈಗ ಎಷ್ಟಿದೆ ನೋಡಿ…..

Pinterest LinkedIn Tumblr

ಬೆಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ದರ ಮತ್ತೆ ಇಳಿಕೆಯಾಗಿದೆ. ಪೆಟ್ರೋಲ್​​-ಡೀಸೆಲ್​​ ದರದಲ್ಲಿ ಕಡಿಮೆ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ವಾಹನ ಸವಾರರಿಗೆ ಕೊಂಚ ನಿರಾಳ ಸಿಕ್ಕಿದಂತಾಗಿದೆ. ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಇಂದು ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ ₹ 74.16 ಮತ್ತು ಡೀಸೆಲ್‌ ದರ 67.03 ರೂ. ಇದೆ ಎನ್ನಲಾಗಿದೆ.

ಹಾಗೆಯೇ ದೆಹಲಿಯಲ್ಲಿ ಲೀಟರ್‌ ಪೆಟ್ರೋಲ್‌ ದರ 71.71 ರೂ. ಇದ್ದರೆ, ಡೀಸೆಲ್‌ ದರ 65.09 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್‌ ದರ 74.51 ರೂ, ಡೀಸೆಲ್‌ ದರ 68.79 ರೂ. ಆಗಿದೆ. ದೀದಿ ನಾಡು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪೆಟ್ರೋಲ್‌ ದರ 74.44 ರೂ. ಮತ್ತು ಡೀಸೆಲ್‌ ದರ 67.50 ರೂ. ಇದೆ. ಅಲ್ಲದೇ ಮುಂಬೈನಲ್ಲಿ ಕೂಡ ಲೀಟರ್​​ ಪೆಟ್ರೋಲ್​​ಗೆ 77.40 ರೂ, ಡೀಸೆಲ್​​ಗೆ 68.26 ರೂ. ಇದೆ.

ಇತ್ತೀಚೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಲ್ಲದ ಕಾರಣ ಕೊಂಚ ನಿರಾಳವಾಗಿದ್ದ ವಾಹನ ಸವಾರರಿಗೆ ಕಹಿಸುದ್ದಿ ಸಿಕ್ಕಿತ್ತು. ಮೂರು ತಿಂಗಳ ಮುನ್ನ ಬೆಲೆ ಏರಿಕೆಗೆ ತತ್ತರಿಸಿ ಹೋಗಿದ್ದ ವಾಹನ ಸವಾರರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ ಎನ್ನಲಾಗಿತ್ತು. ಮುಂದಿನ ದಿನಗಳಲ್ಲಿ ಇಂಧನ ದರದಲ್ಲಿ ಭಾರೀ ಏರಿಕೆಯಾಗಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಲೀಟರ್​​ಗೆ 5 ರೂ.ನಿಂದ 10 ರೂ. ಏರಿಕೆಯಾಗಬಹುದು ಎಂದು ಹೇಳಲಾಗುತ್ತಿತ್ತು.

ಇರಾನ್​​ನಿಂದ ತೈಲ ಆಮದು ಮಾಡಿಕೊಳ್ಳಲು ಅಮೆರಿಕ ನೀಡಿದ್ದ ವಿನಾಯಿತಿ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. ಇದು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಕಾರಣವಾಗಿದೆ. ಈ ಆಮದು ಮೇಲಿನ ನಿರ್ಬಂಧ ಹೇರಿದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 5 ರಿಂದ 10 ರೂ.ವರೆಗೆ ಏರಿಕೆಯಾಗಲಿದೆ ಎನ್ನುತ್ತಿದ್ದವು ಮೂಲಗಳು.

ಯಾಕೆ ಬೆಲೆ ಕಡಿಮೆ?: ಕಳೆದ ಐದು ದಿನಗಳಿಂದ ಪೆಟ್ರೋಲ್-ಡೀಸೆಲ್​​ ಬೆಲೆಗಳು ಇಳಿಕೆಯಾಗುತ್ತಿರವುದನ್ನು ನಾವು ಗಮನಿಸಬಹುದು. ಪೆಟ್ರೋಲ್ ಬೆಲೆ ಇಳಿಕೆಗೆ ಮಾಮೂಲಿಯಂತೆ ಕಾರಣವಾಗಿರುವುದು ಅಂತಾರಾಷ್ಟ್ರೀಯ ಕಚ್ಛಾ ತೈಲ ಬೆಲೆಯಲ್ಲಿ ಆಗುತ್ತಿರುವ ಗಣನೀಯ ಇಳಿಕೆ. ಪ್ರಮುಖ ತೈಲ ಮಾರುಕಟ್ಟೆಯಾದ ಬ್ರೆಂಟ್ ಕ್ರೂಡ್​ನಲ್ಲಿ ಬ್ಯಾರೆಲ್ ತೈಲವು 59.23 ಡಾಲರ್​ಗೆ ಇಳಿಕೆಯಾಗಿದೆ. ಹಾಗೆಯೇ ಡಬ್ಲ್ಯೂಟಿಐ ಕ್ರೂಡ್​ನಲ್ಲಿನ ಬ್ಯಾರೆಲ್ ತೈಲವು 50.53 ಡಾಲರ್ ಆಗಿದೆ. ಮುಂದಿನ ಕೆಲ ದಿನಗಳವರೆಗೂ ಈ ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುವ ಸಂಭವವಿದ್ದು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇನ್ನಷ್ಟು ಇಳಿಯುವ ಸಾಧ್ಯತೆ ಇದೆ.

Comments are closed.