ಕರ್ನಾಟಕ

ಉಪ ಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಲು ಅವಕಾಶವಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌

Pinterest LinkedIn Tumblr

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಆಕ್ಟೋಬರ್ 21ರಂದು ಉಪಚುನಾವಣೆ ಘೋಷಿಸಿದ್ದು, ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಂಜೀವ್ ಕುಮಾರ್ ಅವರು, ಸ್ಪೀಕರ್ ರೂಲಿಂಗ್ ನೀಡಿದ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ತಿಳಿಸಿದರು.

ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಅನರ್ಹ ಶಾಸಕರ ಸ್ಪರ್ಧೆಗೆ ಅವಕಾಶ ಇಲ್ಲ. ಸ್ಪೀಕರ್ ರೂಲಿಂಗ್‌ಗೆ ಬದ್ಧ ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

ಮಸ್ಕಿ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ತಕರಾರು ಅರ್ಜಿ ಇರುವ ಕಾರಣ ಉಪ ಚುನಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಅನರ್ಹ ಶಾಸಕರ ಜತೆ ಸಿಎಂ ಸಭೆ
ಉಪ ಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡುತ್ತಿದ್ದಂತೆಯೇ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅನರ್ಹ ಶಾಸಕರ ಜತೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರನ್ನು ಕರೆಯಿಸಿಕೊಂಡಿರುವ ಯಡಿಯೂರಪ್ಪ ಕಾನೂನಾತ್ಮಕ ಅಂಶಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ

Comments are closed.