ಕರ್ನಾಟಕ

‘ವಡ್ಡ’ ಪದ ಬಳಸಿದ ಈಶ್ವರಪ್ಪ ವಿರುದ್ಧ ದೂರು ದಾಖಲಿಸಲು ಒತ್ತಾಯ

Pinterest LinkedIn Tumblr


ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ‘ವಡ್ಡ’ ಎಂಬ ಪದ ಬಳಸಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಷ್ಮೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್ ಒತ್ತಾಯಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಡ್ಡ ವಡ್ಡ ಎಂದು ಟೀಕೆ ಮಾಡಿದ್ದರು.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ. ಬಸವರಾಜ್, ವಡ್ಡ’ ಎಂಬ ಪದ ಬಳಸಿರುವ ಈಶ್ವರಪ್ಪ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

Comments are closed.