ಕರ್ನಾಟಕ

ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಡಿಜಿಟಲ್ ವ್ಯವಸ್ಥೆ

Pinterest LinkedIn Tumblr


ಬೀದರ: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಡಿಜಿಟಲೈಸೇಶನ್ ಮಾಡಲಾಗುವುದು. ಅಲ್ಲದೆ, ಅಂಗನವಾಡಿ ಕೇಂದ್ರಗಳ ಮಕ್ಕಳ ಫೇಸ್ ರೀಡಿಂಗ್ ಮೂಲಕ ಹಾಜರಾತಿ ಹಾಕುವ ವ್ಯವಸ್ಥೆ ಅಳವಡಿಸುವ ಕಾರ್ಯ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಮಂಗಳವಾರ ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ವತಿಯಿಂದ ಸನ್ಮಾನ ಸ್ವಿಕರಿಸಿ ಮಾತನಾಡಿದ ಅವರು, ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿರುವ ಆಹಾರ ಸಾಮಗ್ರಿಗಳು ಸೇರಿದಂತೆ ಇತರೆ ಸಾಮಗ್ರಿಗಳು ಸೋರಿಕೆ ಆಗುತ್ತಿರುವ ದೂರುಗಳು ಹೆಚ್ಚುತ್ತಿದ್ದು, ಅಂಗನವಾಡಿಗಳ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಅಂಗನವಾಡಿಗಳನ್ನು ಡಿಜಿಟಲೈಸೇಶನ್ ವ್ಯವಸ್ಥೆಗೆ ಒಳಪಡಿಸುವ ಕುರಿತಿ ಈಗಾಗಲೇ ಚರ್ಚೆಗಳು ನಡೆಸಿದ್ದು, ಮುಂದಿನ ದಿನಗಳಲ್ಲಿ ಕಾರ್ಯ ರೂಪಕ್ಕೆ ಬರದಲ್ಲಿದೆ. ಅಂಗನವಾಡಿ ಕೇಂದ್ರಗಳಿಗೆ ಪ್ರತಿನಿತ್ಯ ಹಾಜರಾಗುವ ಮಕ್ಕಳ ಹಾಜರಾತಿಯನ್ನು ಫೇಸ್ ರೇಡಿಂಗ್ ಮೂಲಕ ಪಡೆಯುವ ವ್ಯವಸ್ಥೆ ಜಾರಿಯಾಗಲ್ಲಿದೆ ಎಂದರು.

ಈ ಹಿಂದೆ ಇಲಾಖೆಯಲ್ಲಿ ಶೇ. ೫೦ರಷ್ಟು ಹುದ್ದೆಗಳು ಖಾಲಿ ಇದ್ದವು. ಇದೀಗ ಸಿಡಿಪಿಓ ಸೇರಿದಂತೆ ಇತರೆ ಹುದ್ದೆಗಳು ಭರ್ತಿಮಾಡುವ ಕೆಲಸ ನಡೆದಿದ್ದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಸಿಬ್ಬಂದಿ, ಅಧಿಕಾರಿಗಳ ಪ್ರಮೋಷನ್ ನೀಡುವ ಕೆಲಸ ಕೂಡ ನಡೆಯಲ್ಲಿದೆ ಎಂದ ಅವರು, ನಗರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದರು.

Comments are closed.