ಕರ್ನಾಟಕ

ಎರಡು ದಿನದ ಹಿಂದೆ ಕಾಣೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ

Pinterest LinkedIn Tumblr


ಶಿವಮೊಗ್ಗ: ಎರಡು ದಿನದ ಹಿಂದೆ ಕಾಣೆಯಾಗಿದ್ದ ವಿದ್ಯಾರ್ಥಿನಿ ಇಂದು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ಶವವಾಗಿ ಪತ್ತೆಯಾದ ಹುಡುಗಿಯನ್ನು 17 ವರ್ಷದ ಪೂಜಾ ಎಂದು ಗುರುತಿಸಲಾಗಿದೆ. ಓದುವುದರಲ್ಲಿ ಚುರುಕಗಿದ್ದ ಆಕೆ ರಿಪ್ಪನ್ ಪೇಟೆಯ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಸೋಮವಾರ ಬೆಳಗ್ಗೆ ಕಾಲೇಜಿಗೆ ಹೋದ ಪೂಜಾ ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಗಾಬರಿಗೊಂಡ ಕುಟುಂಬವರು ಕಾಲೇಜಿಗೆ ಹೋಗಿ ವಿಚಾರಿಸಿದ್ದಾರೆ. ಆದರೆ ಆಕೆಗೆ ಆಗಲೇ ಕಾಲೇಜಿನಿಂದ ತೆರಳಿದ್ದಾಳೆ ಎನ್ನುವುದು ಗೊತ್ತಾಗಿದೆ. ಎಷ್ಟು ಹುಡುಕಿದರೂ ಪೂಜಾ ಸಿಗದೆ ಇದ್ದಾಗ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಇಂದು ಬೆಳಗ್ಗೆ ಪೂಜಾಳ ಮನೆಯ ಮುಂದೆ ಇರುವ ಬಾವಿಯಲ್ಲಿ ಆಕೆಯ ಶವ ಕಂಡು ಬಂದಿದೆ.

ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments are closed.