ಕರ್ನಾಟಕ

ವಿದ್ಯಾರ್ಥಿಗಳಿಗೆ 6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆ; ರಾಜ್ಯ ಸರ್ಕಾರ ಚಿಂತನೆ

Pinterest LinkedIn Tumblr

ಕಲಬುರಗಿ: 10ನೇ ತರಗತಿವರೆಗೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ ಪಾಸ್‌ ಮಾಡುವ ಪದ್ಧತಿಯನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, 6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆಯ ಅನುಭವವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆಯಲ್ಲಿ ಬದಲಾವಣೆ ತರಲು ಚಿಂತಿಸಲಾಗುತ್ತಿದೆ. ಎಂದರು.

1ನೇ ತರಗತಿಯಿಂದ 10ನೇ ತರಗತಿಯವರೆಗೆ ಮಕ್ಕಳು ಯಾವುದೇ ಪರೀಕ್ಷೆ ಎದುರಿಸದೇ, ನೇರವಾಗಿ 10ನೇ ತರಗತಿಗೆ ಬಂದು ಪರೀಕ್ಷೆ ಬರೆಯವುದರಿಂದ ಭಯದಿಂದಾಗಿ ಮಕ್ಕಳು ಫೇಲ್ ಆಗುವ ಸಾಧ್ಯತೆಗಳು ಹೆಚ್ಚಿರುತ್ತದೆ. ವಿದ್ಯಾರ್ಥಿಗಳನ್ನು ಫೇಲ್ ಮಾಡುವ ಉದ್ದೇಶ ಇದಲ್ಲ. ಆದರೆ ಅವರಿಗೆ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸುವ ಆತ್ಮವಿಶ್ವಾಸ ಹುಟ್ಟಲಿ ಎಂಬ ಕಾರಣಕ್ಕೆ ಈ ಚಿಂತನೆ ನಡೆದಿದೆ ಎಂದರು.

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಯಾವುದೇ ಇರಲಿ ಎಲ್ಲಾ ಶಾಲಾಮಕ್ಕಳಿಗೂ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು. ಅಲ್ಲದೆ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಬಿಸಿ ಊಟವನ್ನು ವಿಸ್ತರಿಸುವ ಚಿಂತನೆ ನಡೆದಿದೆ ಎಂದರು.

Comments are closed.